ಕೆ.ಎಸ್ .ಎಸ್ ಕಾಲೇಜಿನಲ್ಲಿ ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಐ ಕ್ಯೂ ಎ ಸಿ ಸಹಯೋಗದೊಂದಿಗೆ ಇತಿಹಾಸ ವಿಭಾಗದ ವತಿಯಿಂದ ದಿನಾಂಕ 27/09/2025ರಂದು ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದಡಾ. ದಿನೇಶ್ ಪಿ. ಟಿ ಅವರು ವಹಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ ಪ್ರಮೋದ್ ಎಂ ಜಿ ಅ ವರು ಸಂಸ್ಕೃತಿ ಆಚರಣೆ ನಂಬಿಕೆಗಳು ಪರಂಪರಾನುಗತವಾಗಿ ಬಂದವುಗಳು ಇವುಗಳನ್ನು ಉಳಿಸಿ ಬೆಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಪಂಚಲಿಂಗೇಶ್ವರ ದೇವಸ್ಥಾನದ ಇತಿಹಾಸ,ಮತ್ತು ಕುಂಬಾರುಊರಿನ ಇತಿಹಾಸದ ಪ್ರಬಂಧ ಮಂಡನೆಯನ್ನು ಪ್ರಥಮ ಬಿಎ ಅಂಕಿತಮತ್ತು ವರ್ಷಿಣಿ ಕೆ ಪ್ರಬಂಧ ವನ್ನು ಮಂಡಿಸಿದರು.ಐತಿಹಾಸಿಕ ಪರಂಪರೆಯನ್ನು ಕುರಿತು ತರಗತಿವಾರು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ತೇಜಸ್ ಕಳಿಗೆ ಸದಸ್ಯರಾದ ಶ್ರೀಮತಿ ವಿಮಲಾ ರಂಗಯ್ಯ ಉಪಸ್ಥಿತರಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ವಿದುಷಿ ಅಭಿಜ್ಞಾ ಎ ಹಾಗೂ ಮಂಗಳೂರಿನ ತಾಂತ್ರಿಕ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಹಂಸನಂದಿನಿ ಸಹಕರಿಸಿದರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದ್ವಿತೀಯ ಬಿಕಾಂ ಬಿ ಹಾಗೂ ದ್ವಿತೀಯ ಸ್ಥಾನ ಪ್ರಥಮ ಬಿ ಕಾಂ ಎ ಪಡೆದುಕೊಂಡಿತು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸಾದ್ ಎನ್ ಸ್ವಾಗತಿಸಿದರು. ಅಂತಿಮ ಬಿಎ ಪದವಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿ, ಅರ್ಚನಾ ಎನ್ ಕಾರ್ಯಕ್ರಮ ನಿರೂಪಿಸಿ, ಇತಿಹಾಸ ವಿಭಾಗದ ಉಪನ್ಯಾಸಕಿ ನಮಿತಾ ಎಂಎ ವಂದಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top