ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮನವಿ
ಸುಳ್ಯ: ಕರ್ನಾಟಕ ರಾಜ್ಯ ಹಿಂದುಳಿದ *ವರ್ಗಗಳ ಆಯೋಗದಿಂದ* ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದು, ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು ಜಾಗೃತಿ ಮೂಡಿಸಲು ಸಾಧ್ಯವಿದೆ. ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ […]










