ಎಐಸಿಸಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರೀ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು.
ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯದಲ್ಲಿ ಏರು ಪೇರು ಆಸ್ಪತ್ರೆಗೆ ದಾಖಲು

















