ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಒಬ್ಬ ವಿದ್ಯಾರ್ಥಿ ಜೀವಂತ ದಹನವಾದ ಘಟನೆ ವರದಿಯಾಗಿಧ.
ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ (7) ಸಾವನ್ನಪ್ಪಿದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು,ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top