ಅಕ್ಟೋಬರ್ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ. ಕ್ಯಾಬಿನೆಟ್ ಪುನಾರಚನೆಗೂ ಮುನ್ನ ಈ ಔತಣಕೂಟ ಏರ್ಪಡಿಸಲಾಗಿದೆ. ಸುಮಾರು 15 ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನ. 11ರೊಳಗೆ ಬಿಹಾರ್ನಲ್ಲಿ ಎಲ್ಲ ಹಂತದ ಚುನಾವಣೆ ಮುಗಿಯಲಿದ್ದು, ನ. 14 ರಂದು ಬರುವ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ, ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯ ಸಂಪುಟದಿಂದ 15 ಮಂದಿಗೆ ಕೋಕ್ ?

















