ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಲ್ಮಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ.
ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ತಿಳಿದು ಬಂದಿದೆ.
ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಡೆತ್ ನೋಟ್‌ನಲ್ಲಿ ನಾಲ್ವರು ಬ್ಲ್ಯಾಕ್‌ಮೇಲ್ ಮಾಡಿದವರ ಹೆಸರು ಬರೆದಿಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಿಯತಮೆ ಜತೆಗಿದ್ದ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ,ನೊಂದ ಯುವಕ ಆತ್ಮಹತ್ಯೆ





















































