ದಸರಾ ಸಂದರ್ಭದಲ್ಲಿ ಮೈಸೂರಿಗೆ ಬೆಲೂನ್ ಮಾರಲು ವಲಸೆ ಬಂದಿದ್ದ 10 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಾಳೆ.
ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿ ಕಾರ್ತಿಕ್ನನ್ನು ಕೊಳ್ಳೇಗಾಲದಲ್ಲಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬಾಲಕಿಯ ಕುಟುಂಬ ಕಲಬುರಗಿಯಿಂದ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿತ್ತು. ಇವರು ದೊಡ್ಡಕೆರೆ ಮೈದಾನದಲ್ಲಿ ತಂಗಿದ್ದು ಬೇರೆ ಬೇರೆ ಸ್ಥಳಗಳಲ್ಲಿ ಬೆಲೂನ್ ಮಾರುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಬೆಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ರೇಪ್ ಆ್ಯಂಡ್ ಮರ್ಡರ್ : ಆರೋಪಿ ಕಾಲಿಗೆ ಗುಂಡು



































