ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದ್ದು, ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ ಎಂದು ಹೇಳಿದರು.
ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಹಾಗೆಯೇ ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.
ಕಾಂತಾರ ಸಿನಿಮಾಕ್ಕೆ ಭಾರೀ ವಿರೋಧ

















