ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಇನ್ನೂ ಮೂರು ದಿನ ಸಾಧಾರಣ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಅಕ್ಟೋಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ಇಂದು ಭಾರೀ ಮಳೆ ಸಾಧ್ಯತೆ

















