ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ(ಅ16) ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.
ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ಭಾಗವತರಾಗಿ ಕಲಾ ಸೇವೆ ಮಾಡಿ ಯಕ್ಷ ಅಭಿಮಾನಿಗಳ ಮನಗೆದ್ದಿದ್ದರು.
ಆ ಕಾಲದ ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು.ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರ.
ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.
ಇಹ ಲೋಕ ತ್ಯಜಿಸಿದ ಪ್ರಸಿದ್ಧ ಭಾಗತ ದಿನೇಶ್ ಅಮ್ಮಣ್ಣಾಯ

















