ಅ.30ರಂದು ಬಿಸಿಲೆ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಂದ ಅಂಬ್ಯುಲೆನ್ಸ್ ಮುಂದಿನಿಂದ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಸ್ಕೂಟಿ ಸವಾರ ಮಹಮ್ಮದ್ ಮನ್ಸೂರು ಪ್ರಾಯ 38 ವರ್ಷ ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ . 128/2025 :110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನ ಮೇಲೆ ಪ್ರಕರಣ ದಾಖಲು

















