ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದಲ್ಲಿ ನ.1ರಿಂದ ಸಾಹಿತ್ಯ ಸಂಭ್ರಮ‌ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ -೨೦೨೫ ಕಾರ್ಯಕ್ರಮವು ದಿನಾಂಕ ೦೧.೧೧.೨೦೨೫ ರಿಂದ ೦೭.೧೧.೨೦೨೫ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ,ವಲಯ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಚಂದ್ರಾವತಿ ಬಡ್ಡಡ್ಕ ತಿಳಿಸಿದರು.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ದಿನಾಂಕ ೦೧.೧೧.೨೦೨೫ ಶನಿವಾರ ಅಪರಾಹ್ನ ೨.೦೦ಗಂಟೆಗೆ ಸಾಹಿತ್ಯ ಸಂಭ್ರಮ -೨೦೨೫ರ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಗಾನ ಕಲರವ ಕಾರ್ಯಕ್ರಮವು ರಂಗಮಯೂರಿ ಕಲಾಶಾಲೆ (ರಿ.) ಸುಳ್ಯ ಇವರ ಸಹಕಾರದೊಂದಿಗೆ ರಂಗಮಯೂರಿ ಕಲಾಶಾಲೆ ಸುಳ್ಯದಲ್ಲಿ ನಡೆಯಲ್ಲಿದ್ದು, ಸುದ್ದಿ ಸಮೂಹ ಸಂಸ್ಥೆಗಳ ಪ್ರಧಾನ ಸಂಪಾದಕರಾದ ಡಾ| ಯು. ಪಿ. ಶಿವಾನಂದರವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಸಭಾದ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ಕೇಕಡ್ಕ ಇವರು ಭಾಗವಹಿಸಲಿದ್ದಾರೆ, ಅಂತೆಯೇ ಕನ್ನಡ ಗಾನ ಕಲರವ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಹೆಸರಾಂತ ಗಾಯಕರು ಮತ್ತು ನೆಹರೂ ಮೆಮೋರಿಯಲ್ ಕಾಲೇಜ್ ಸುಳ್ಯ ಇಲ್ಲಿಯ ತುಳಸಿ ಮತ್ತು ತಂಡ ಹಾಗೂ ಸುಳ್ಯದ ರಂಗಮಯೂರಿ ಕಲಾ ಶಾಲಾ ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಿನಾಂಕ ೦೨.೧೧.೨೦೨೫ರ ಭಾನುವಾರ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ಹೋಬಳಿ ಘಟಕ ಹಾಗೂ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಕಾರದೊಂದಿಗೆ ದಿ| ಯು. ಸುಬ್ರಾಯ ಗೌಡ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವು ಸರಕಾರಿ ಪದವಿಪೂರ್ವ ಕಾಲೇಜ್ ಸುಳ್ಯ ಇಲ್ಲಿ ವಿದ್ಯಾರ್ಥಿನಿ ಕು. ಪೌರ್ಣಮಿ-ಸರಕಾರಿ ಪದವಿಪೂರ್ವ ಕಾಲೇಜ್ ಸುಳ್ಯ ಇವರ ಸಮ್ಮೇಳಾನಧ್ಯಕ್ಷತೆಯಲ್ಲಿ ನಡೆಯಲಿದೆ. ರಾಷ್ಟ್ರ ಧ್ವಜಾರೋಹಣವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ. ಪಿ. ಬಿ. ಸುಧಾಕರ ರೈ, ಕನ್ನಡ ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ. ಲಿಂಗಪ್ಪ ಗೌಡ ಕೇರ್ಪಳ ಇವರು ನೆರವೇರಿಸಲಿದ್ದಾರೆ. ಸಮ್ಮೇಳನದ ದೀಪ ಪ್ರಜ್ವಲನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ. ವಿ. ಚಿದಾನಂದ ಇವರು ನೆರವೇರಿಸಲ್ಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ವಿದ್ಯಾರ್ಥಿನಿ ಕು. ಆತ್ಮೀಯ ಕೆ. ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪೂರ್ವಾಹ್ನ ೧೧.೩೦ರಿಂದ ಸುಳ್ಯ ತಾಲೂಕಿನ ವಿವಿಧ ಶಾಲಾ ಕಾಲೇಜು ವಿದಾರ್ಥಿಗಳಿಂದ ವಿದ್ಯಾರ್ಥಿ ಕವಿಗೋಷ್ಠಿ ನಡೆಯಲಿದೆ. ಅಪರಾಹ್ನ ೧.೩೦ರಿಂದ “ಡಿಜಿಟಲ್ ಯುಗದಲ್ಲಿ ಕನ್ನಡ ಭಾಷಾ ಬೆಳವಣಿಗೆ – ಒಂದು ಸವಾಲು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿ ಚರ್ಚಾ ಗೋಷ್ಠಿ ನಡೆಯಲ್ಲಿದ್ದು, ಶ್ರೀ ಪ್ರಕಾಶ್ ಮೂಡಿತ್ತಾಯ ಸಮಾನ್ವಯಕಾರರಾಗಿ ಭಾಗವಹಿಸಲಿದ್ದಾರೆ. ಅಪರಾಹ್ನ ೨.೪೫ರಿಂದ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಇವರ ಸಭಾದ್ಯಕ್ಷತೆಯಲ್ಲಿ ನಡೆಯಲ್ಲಿದ್ದು, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ವಿದಾರ್ಥಿನಿ ಕು. ಶ್ರೇಯಾ ಎಂ. ಸಮಾರೋಪ ಭಾಷಣ ಮಾಡಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಿನಾಂಕ ೦೩.೧೧.೨೦೨೫ರ ಸೋಮವಾರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಸಹಕಾರದೊಂದಿಗೆ ಕನ್ನಡಗಾನ ಯಾನ ಕಾವ್ಯಮಿಲನ ಹಾಗೂ ಸ್ಪರ್ಧಾ ಕಾರ್ಯಕ್ರಮ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಂಡೆಕೋಲು ಇಲ್ಲಿ ಪೂರ್ವಾಹ್ನ ೯.೩೦ಗಂಟೆಗೆ ನಡೆಯಲಿದೆ. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀ ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಮಂಡೆಕೋಲು ಇದರ ಅಧ್ಯಕ್ಷರಾದ ಶ್ರೀ. ಕುಶಲ ಉದ್ದಂತಡ್ಕ ಹಾಗೂ ಕನ್ನಡ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ. ಸುರೇಶ್ ಕಣೆಮರಡ್ಕ ನೆರವೇರಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಲ್ಲಿದ್ದು, ಖ್ಯಾತ ವೈದ್ಯರಾದ ಡಾ| ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ ದೀಪ ಪ್ರಜ್ವಲನೆ ಗೈಯಲ್ಲಿದ್ದಾರೆ. ಸಾಹಿತಿಗಳಾದ ಶ್ರೀ ಚಂದ್ರಶೇಖರ ಮಂಡೆಕೋಲು ರಾಜ್ಯೋತ್ಸವ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ. ಸದಾನಂದ ಮಾವಜಿ ಭಾಗವಹಿಸಲಿದ್ದಾರೆ.

ದಿನಾಂಕ ೦೪.೧೧.೨೦೨೫ರ ಮಂಗಳವಾರ ನೆಹರು ಮೆಮೋರಿಯಲ್ ಕಾಲೇಜ್, ಸುಳ್ಯ ಇದರ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ಸಹಕಾರದೊಂದಿಗೆ ನೆಹರು ಮೆಮೋರಿಯಲ್ ಕಾಲೇಜ್, ಸುಳ್ಯದಲ್ಲಿ ಕನ್ನಡ ನುಡಿ ಸಂಭ್ರಮ – ಸ್ಪರ್ಧಾ ಕಾರ್ಯಕ್ರಮ ಪೂರ್ವಾಹ್ನ ೯.೩೦ಗಂಟೆಗೆ ನಡೆಯಲಿದೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಲ್ಲಿದ್ದು, ಹಿರಿಯ ಸಾಹಿತಿಗಳಾದ ಶ್ರೀಮತಿ. ಲೀಲಾ ದಾಮೋದರ ದೀಪ ಪ್ರಜ್ವಲನೆ ಗೈಯಲಿದ್ದಾರೆ.

ದಿನಾಂಕ ೦೫.೧೧.೨೦೨೫ರ ಬುಧವಾರ ಪ್ರೆಸ್ ಕ್ಲಬ್ ಸುಳ್ಯ ಇದರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಉಪನ್ಯಾಸ – ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಕಾರ್ಯಕ್ರಮ ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ಶ್ರೀ ಕುತ್ಯಾಳ ನಾಗಪ್ಪ ಗೌಡ (ಕಿರಣ) ಉದ್ಘಾಟಿಸಲ್ಲಿದ್ದು, ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಲಿದ್ದಾರೆ. ಜಾನಪದ ಸಂಶೋಧಕರಾದ ಶ್ರೀ. ಸುಂದರ ಕೇನಾಜೆಯವರು “ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲ್ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ. ಜಯಮ್ಮ ಬಿ ಚೆಟ್ಟಿಮಾಡ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಲೀಲಾಧರ್ ಡಿ. ವಿ. ಯವರು ಭಾಗವಹಿಸಲಿದ್ದಾರೆ. ಪ್ರೆಸ್‌ಕ್ಲಬ್ ಸುಳ್ಯ ಇದರ ಗೌರವಾಧ್ಯಕ್ಷರಾದ ಶ್ರೀ ಹರೀಶ್ ಬಂಟ್ವಾಳ್ ಇವರ ಅಧ್ಯಕ್ಷತೆಯಲ್ಲಿ ಪತ್ರ ಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಕಾರ್ಯಕ್ರಮ ಕೂಡಾ ನಡೆಯಲಿದೆ.

ದಿನಾಂಕ ೦೬.೧೧.೨೦೨೫ರ ಗುರುವಾರ ಪೂರ್ವಾಹ್ನ ೧೦ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರಧಾನ ಮಂತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇವರ ಸಹಕಾರದೊಂದಿಗೆ ಪಂಜ ಹೋಬಳಿ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕಲರವ ಹಾಗೂ ವಿದಾರ್ಥಿಗಳಿಗೆ ಸ್ಥಳದಲ್ಲಿಯೇ ಕವನ ರಚನೆ, ಕನ್ನಡ ಭಾಷಣ,
ಕನ್ನಡ ಗೀತ ಗಾಯನ ಸ್ಪರ್ಧೆಗಳು ಪ್ರಧಾನ ಮಂತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಗುತ್ತಿಗಾರು ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ. ವೆಂಕಟ್ ದಂಬೆಕೋಡಿ ಉದ್ಘಾಟಿಸಲ್ಲಿದ್ದು, ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಲಿದ್ದಾರೆ.

ದಿನಾಂಕ ೦೭.೧೧.೨೦೨೫ರ ಶುಕ್ರವಾರ ಸಾಯಂಕಾಲ ೦೫.೩೦ ಗಂಟೆಗೆ ಮಿತ್ರ ಯುವಕ ಮಂಡಲ (ರಿ.) ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗಲಡ್ಕ ಇವರ ಸಹಕಾರದೊಂದಿಗೆ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ, ಸನ್ಮಾನ ಗಾನ ವೈಭವ ಕಾರ್ಯಕ್ರಮ ಅಯ್ಯಪ್ಪ ಭಜನಾ ಮಂದಿರ ದುಗಲಡ್ಕ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಪೇರಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಲ್ಲಿದ್ದು, ನಗರ ಯೋಜನಾ ಪ್ರಾಧಿಕಾರ ಸುಳ್ಯ ಇದರ ಅಧ್ಯಕ್ಷರಾದ ಶ್ರೀ. ಕೆ. ಎಂ. ಮುಸ್ತಫಾ ಸಮಾರೋಪ ಮಾತುಗಳನ್ನಾಡಲಿದ್ದಾರೆ.
ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಪೂರ್ವಾಧ್ಯಕ್ಷರಾದ ಶ್ರೀ. ಪಿ. ಸಿ. ಜಯರಾಮ ಇವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರೀಮತಿ. ಉದಯಕುಮಾರಿ ಬಿರ್ಮಕಜೆ ಇವರಿಗೆ ಕಾದಂಬರಿ ಕ್ಷೇತ್ರದಲ್ಲಿ, ಡಾ. ಚಂದ್ರಶೇಖರ ದಾಮ್ಲೆ ಇವರಿಗೆ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಶ್ರೀ ಚಂದ್ರಶೇಖರ ಮೋಂಟಡ್ಕ ಇವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಕನ್ನಡ ರಾಜ್ಯೋತ್ಸವ ಸನ್ಮಾನವನ್ನು ಪ್ರಧಾನ ಮಾಡಲಿದ್ದೇವೆ. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಯಕ್ಷಗಾನ ವೈಭವ ಕಾರ್ಯಕ್ರಮ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಸಾಹಿತ್ಯ ಸಂಭ್ರಮ -೨೦೨೫ರ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ
ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ,
ಕೋಶಾಧಿಕಾರಿ ದಯಾನಂದ ಆಳ್ವ , ಕೇಶವ ಸಿ.ಎ,ರಾಮಚಂದ್ರ.ಪಿ, ಲತಾಶ್ರೀ ಸುಪ್ರಿತ್ ಮೋಂಟಡ್ಕ ಇತರರು ಉಪಸ್ಥಿತರಿದ್ದರು

.

Leave a Comment

Your email address will not be published. Required fields are marked *

error: Content is protected !!
Scroll to Top