October 2025

ಮಂಡೆಕೋಲು : 21 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ , ಧಾರ್ಮಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಅಕ್ಟೋಬರ್ 26 ರಂದು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಯೋಜನೆಯ ಅಜ್ಜಾವರ ವಲಯಕ್ಕೆ ಸಂಬಂಧಿಸಿದ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡೆಕೋಲು, ಕಲ್ಲಡ್ಕ-ಪೆರಾಜೆ, ಪೇರಾಲು ಹಾಗೂ ಪೇರಾಲು-ಅಂಬ್ರೋಟಿ-ಎ ಒಕ್ಕೂಟಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಆ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. […]

ಮಂಡೆಕೋಲು : 21 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ , ಧಾರ್ಮಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ Read More »

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮ ಹತ್ಯೆ

ಸುಳ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಟ್ಟಿಪಳ್ಳದ ಕಾನತ್ತಿಲ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ದುಗಲಡ್ಕದ ಕೇಶವ ಪೂಜಾರಿ ಎಂಬವರ ಮಗ ವೀಕ್ಷಿತ್(19) ಆತ್ಮಹತ್ಯೆಗೆ ಶರಣಾದವರು. ಇಂದು ಕಾಲೇಜಿನಲ್ಲಿ ಪರೀಕ್ಷೆ ಬರೆದು ರೂಂಗೆ ಬಂದ ವೀಕ್ಷಿತ್ ರೂಂನಲ್ಲಿ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತಿದಿನ ವೀಕ್ಷಿತ್ ತನ್ನ ತಾಯಿ ಪದ್ಮನಿ ಅವರನ್ನು ಅವರು ಕೆಲಸ ಮಾಡುವ ಜಾಗದಿಂದ ಮನೆಗೆ ಕರೆದುಕೊಂಡು ಬರುತ್ತಿದ್ದರು.ಆದರೆ ಇಂದು ಬಂದಿರಲಿಲ್ಲ. ಕರೆ ಮಾಡಿದ್ರೆ ಕಾಲ್ ಕೂಡ ರಿಸೀವ್ ಮಾಡಿರಲಿಲ್ಲ..

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮ ಹತ್ಯೆ Read More »

ತೊಡಿಕಾನ : ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಪಾಷಾಣಮೂರ್ತಿ ಅಮ್ಮನವರ ದೈವಸ್ಥಾನದಲ್ಲಿ ಶ್ರೀ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ (ಅಗೇಲು ಸೇವೆ) ಕಾರ್ಯಕ್ರಮ ಅ. ೨೮ರಂದು ಹಗಲು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿಯವರು, ಜೀರ್ಣೋದ್ದಾರ ಸಮಿತಿ ಯವರು, ಸಿಬ್ಬಂದಿ ವರ್ಗ, ಭಕ್ತಾದಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ತೊಡಿಕಾನ : ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ Read More »

ತೊಡಿಕಾನ : ಹಾಸ್ಪಾರೆ ಅಪ್ಪಯ್ಯ ಗೌಡ ನಿಧನ

ತೊಡಿಕಾನ ಗ್ರಾಮದ ಹಾಸ್ಪಾರೆ ಅಪ್ಪಯ್ಯ ಗೌಡ ಅವರು ಅಸೌಖ್ಯದಿಂದ ತಮ್ಮ ಮನೆಯಲ್ಲಿ ಅ.28ರಂದು ನಿಧನರಾದರು.ಅವರಿಗೆ ಸುಮಾರು 70 ವರ್ಷ ಪ್ರಾಯವಾಗಿತ್ತು.ಮ್ರತರು ಪತ್ನಿ,ಮಕ್ಕಳಾದ ಭಾರತಿ,ಕವಿತ,ಸವಿತ ಮತ್ತು ಸತೀಶ ಅಳಿಯಂದಿರನ್ನು ಮೊಮ್ಮಕ್ಕಳನ್ನು,ಕುಟುಂಬಸ್ಥರನ್ನು ಅಗಲಿದ್ದಾರೆ.

ತೊಡಿಕಾನ : ಹಾಸ್ಪಾರೆ ಅಪ್ಪಯ್ಯ ಗೌಡ ನಿಧನ Read More »

ಸಹಾಯಕ ಸಬ್ ಇನ್ಸ್ ಪೆಕ್ಟರ್ ಉದಯ ಕೈಪಡ್ಕ ನಿಧನ

ಸಂಪಾಜೆ ಗ್ರಾಮದ ಕೈಪಡ್ಕದ ನಿವಾಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಉದಯ ಹನಿಯಡ್ಕ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಅನಾರೋಗ್ಯ ದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಉದಯ ಹನಿಯಡ್ಕ ಆನಂದ ಗೌಡ ಹಾಗೂ ರುಕ್ಮಿಣಿ ದಂಪತಿಗಳ ಪ್ರಥಮ ಪುತ್ರ.

ಸಹಾಯಕ ಸಬ್ ಇನ್ಸ್ ಪೆಕ್ಟರ್ ಉದಯ ಕೈಪಡ್ಕ ನಿಧನ Read More »

ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ವ್ಯಕ್ತಿ ಸಾವು

ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.ವ್ಯಕ್ತಿಗೆ ಸುಮಾರು 65 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.ಸುಳ್ಯ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ವ್ಯಕ್ತಿ ಸಾವು Read More »

ಮನೆಯ ಹಿಂಬದಿಯ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಕೊಣಾಜೆಯ ಬೆಳ್ಳ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿಂದ ವರದಿಯಾಗಿದೆ. ಒಂದು ಒಂದೂವರೆ ವರ್ಷದ ಮಗುವೊಂದು ಆಟವಾಡುತ್ತಾ ಹೋಗಿ ಮನೆಯ ಹಿಂಭಾಗದಲ್ಲಿ ಇರುವ ಬಾವಿಗೆ ಬಿದ್ದಿದೆ. ಕೂಡಲೇ ಮನೆ ಮಂದಿ ಬೊಬ್ಬೆ ಹಾಕಿದಾಗ ಮಗುವಿನ ಚಿಕ್ಕಪ್ಪ ಜೀವನ್ ಬಾವಿಗೆ ಹಾರಿದ್ದಾರೆ. ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ . ಅದೃಷ್ಟವಶಾತ್ ಯಾವುದೇ ಅಪಾಯವಾಗದೇ ಮಗು ತಾಯಿಯ ಮಡಿಲು ಸೇರಿದೆ. ಬಳಿಕ ಮಗುವನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ಪರೀಕ್ಷೆ

ಮನೆಯ ಹಿಂಬದಿಯ ಬಾವಿಗೆ ಬಿದ್ದ ಮಗುವಿನ ರಕ್ಷಣೆ Read More »

ಕಾಮಗಾರಿ ನಡೆಯದೆ ನೆನೆಗುದಿಗೆ ಬಿದ್ದ ನಿರ್ಮಾಣ ಹಂತದ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿ ಕಾಮಗಾರಿ ನಡೆಯದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂಬೇಡ್ಕ‌ರ್ ಭವನ ಕಟ್ಟಡದ ಸ್ಥಳಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯರವರು ಅಕ್ಟೋಬರ್ ೨೭ರಂದು ಭೇಟಿ ನೀಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವೀಕ್ಷಣೆ ನಡೆಸಿದರು.ಸಂದರ್ಭದಲ್ಲಿ ಶಾಸಕರೊಂದಿಗೆ ಇದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಂಜಿನಿಯರ್ ಹಾಗೂ ಗುತ್ತಿಗೆದಾರರಲ್ಲಿ ಮುಂದಿನ ಕಾಮಗಾರಿಗೆ ಬೇಕಾಗಿರುವ ಎಸ್ಟಿಮೇಟ್ ಕೂಡಲೇ ತಯಾರಿಸಿ ಕೊಡುವ ಕುರಿತು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳಾದ ಎಸ್.ಎನ್‌. ಮನ್ಮಥ, ಶುಭೋದ್

ಕಾಮಗಾರಿ ನಡೆಯದೆ ನೆನೆಗುದಿಗೆ ಬಿದ್ದ ನಿರ್ಮಾಣ ಹಂತದ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಮೊಂತಾ ಚಂಡಮಾರುತದ ಪ್ರಭಾವ,ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ!

ಮೊಂತಾ ಚಂಡಮಾರುತ ನಾಳೆ ಆಂಧ್ರ ಪ್ರದೇಶದ ತೀರಕ್ಕೆ ಅಪ್ಪಳಿಸಲಿದ್ದು, ಕರ್ನಾಟಕಕ್ಕೆ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಕಳೆದ ತಿಂಗಳಿನಲ್ಲಿ ವಿಪರೀತ ಮಳೆಯಿದ್ದ ಕಾರಣ ಹಲವು ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಮತ್ತೆ ಧಾರಾಕಾರ ಮಳೆಯಾಗುವ ಪರಿಣಾಮ ಅಕ್ಟೋಬರ್ 28ರಂದು ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳ ಶಾಲಾ – ಕಾಲೇಜುಗಳಇಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ,

ಮೊಂತಾ ಚಂಡಮಾರುತದ ಪ್ರಭಾವ,ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ! Read More »

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಕ್ಯಾ. ಚೌಟ ಅವರಿಗೆ ಪುತ್ತೂರಿನಲ್ಲಿ ಬಿಜೆಪಿಯಿಂದ ಸನ್ಮಾನ

ಪುತ್ತೂರು: ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿಶೇಷ ಹೆಮ್ಮೆಯುಂಟು ಮಾಡಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾಗವಹಿಸುವುದಕ್ಕೆ ಭಾರತದ ಸರ್ವಪಕ್ಷಗಳ ನಿಯೋಗದಲ್ಲಿ ತೆರಳುವುದಕ್ಕೆ ತಮ್ಮನ್ನು ಗುರುತಿಸಿ ಅವಕಾಶ ನೀಡುವ ಮೂಲಕ ವಿಶೇಷ ಮನ್ನಣೆ

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಕ್ಯಾ. ಚೌಟ ಅವರಿಗೆ ಪುತ್ತೂರಿನಲ್ಲಿ ಬಿಜೆಪಿಯಿಂದ ಸನ್ಮಾನ Read More »

error: Content is protected !!
Scroll to Top