October 2025

ಅ .15_25 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ.ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ […]

ಅ .15_25 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ Read More »

ಆಡಿಂಜದಿಂದ ಆಲೆಟ್ಟಿವರೆಗಿನ ಹದೆಗೆಟ್ಟ ಲೋಕೋಪಯೋಗಿ ರಸ್ತೆಯನ್ನು ಶ್ರಮದಾನ ಮೂಲಕ ದುರಸ್ಥಿಪಡಿಸಿದ ನಾಗರಿಕರು

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಆಡಿಂಜಾದಿಂದ ಆಲೆಟ್ಟಿ ವರೆಗಿನ ಲೋಕೋಪಯೋಗಿ ರಸ್ತೆಯು ತೀವ್ರ ಹದೆಗೆಟ್ಟಿದ್ದು, ಇಲಾಖೆಯಾಗಲಿ, ಜನಪ್ರತಿನಿದಿಗಳಾಗಲಿ ಎಷ್ಟೇ ಮನವಿಮಾಡಿದರೂ ಸ್ಪಂದಿಸದೇ ಇರದಿರುವುದರಿಂದ ಈ ಭಾಗದ ಸಾರ್ವಜನಿಕರು ಮತ್ತು ಸ್ಥಳೀಯ ಯುವಕ ಮಂಡಲಗಳ ಸದಸ್ಯರು ಸೇರಿಕೊಂಡು ಅ. 12ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರಮದಾನದ ಮೂಲಕ ರಸ್ತೆ ದುರಸ್ಥಿ ಪಡಿಸಿದರು.ರಸ್ತೆಯುದ್ದಕ್ಕೂ ಅಲ್ಲಲ್ಲಿ ಹೊಂಡ ಗುಂಡಿಗಳಿಂದ ತುಂಬಿರುವ ರಸ್ತೆಗೆ ರೆಡಿ ವೆಟ್ ಮಿಕ್ಸ್ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚಿದರು.ಈ ರಸ್ತೆಯಲ್ಲಿ ಸಂಚರಿಸುವ ಎಸ್ ವಿ ಕನ್ ಸ್ಟ್ರಕ್ಷನ್ ನ ಪುನೀತ್

ಆಡಿಂಜದಿಂದ ಆಲೆಟ್ಟಿವರೆಗಿನ ಹದೆಗೆಟ್ಟ ಲೋಕೋಪಯೋಗಿ ರಸ್ತೆಯನ್ನು ಶ್ರಮದಾನ ಮೂಲಕ ದುರಸ್ಥಿಪಡಿಸಿದ ನಾಗರಿಕರು Read More »

ತೆಕ್ಕಿಲ್ ಹೆಚ್ ಪಿ ಗ್ಯಾಸ್ ಸಿಬ್ಬಂಧಿ ವರ್ಗದವರಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಮ್ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ

ಅರಂತೋಡು ತೆಕ್ಕಿಲ್ ಗ್ಯಾಸ್ ಏಜೆನ್ಸಿಯ ಸಿಬ್ಬಂಧಿ ವರ್ಗದವರಿಂದ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಸ್ಥೆಯ ಮಾಲಕರಾದ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಒ. 11 ರಂದು ಸನ್ಮಾನಿಸಲಾಯಿತು. ಸನ್ಮಾನವನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ನೆರವೇರಿಸಿದರು. ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ಧನುರಾಜ್ ಊರುಪಂಜ, ಬಬಿತ ಅಡ್ಯಡ್ಕ, ಬಿಂದ್ಯಾ ಕಿರ್ಲಾಯ, ರಹೀಮ್ ನಾರ್ಕೋಡು, ಉಮ್ಮರ್ ಬೆಳ್ಳಾರೆ, ಹನೀಫ್ ಮೊಟ್ಟೆಂಗಾರ್ , ಮೊಕ್ಷಿತ್ ನಾಗನ, ಚಂದ್ರಶೇಖರ ಕೊಯನಾಡು, ಖಾದರ್ ಕಡೆಪಾಲ

ತೆಕ್ಕಿಲ್ ಹೆಚ್ ಪಿ ಗ್ಯಾಸ್ ಸಿಬ್ಬಂಧಿ ವರ್ಗದವರಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಮ್ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ Read More »

ಮಾರಿಷಸ್ ನಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಯುವಕ ಜಲಪಾತದ ನೀರಲ್ಲಿ ಮುಳುಗಿ‌ ಸಾವು

ಮಾರಿಷಸ್ ನಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಲ್ಲುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದಾರೆ.ಮೃತದೇಹ ವನ್ನು ಊರಿಗೆ ತರುವ ನಿಟ್ಟಿನಲ್ಲಿ ಸಂಸದರು ಮಧ್ಯ ಪ್ರವೇಶಿಸಿ ಪ್ರಯತ್ನ ನಡೆಸುತ್ತಿದ್ದಾರೆ.ಕಲ್ಲಾಜೆಯ ಜಯಲಕ್ಷ್ಮಿ ಭಟ್ ಎಂಬವರ ಪುತ್ರರಾಗಿರುವ ನಂದನ್ ಎಸ್. ಭಟ್ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಅಧ್ಯಯನ ನಡೆಸುತ್ತಿದ್ದರು. ಭಾನುವಾರ ಜಲಪಾತ ವೀಕ್ಷಣೆಗೆಂದು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು

ಮಾರಿಷಸ್ ನಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಯುವಕ ಜಲಪಾತದ ನೀರಲ್ಲಿ ಮುಳುಗಿ‌ ಸಾವು Read More »

ಅರಂತೋಡು : ಸ್ವಾಮಿ ಕೊರಗಜ್ಜ ದೈವಸ್ಥಾನ ಕೊಡಂಕೇರಿಯಲ್ಲಿ ಅ.17ಕ್ಕೆ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 17-10-2025 ರ ತುಲಾ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ 7022077809

ಅರಂತೋಡು : ಸ್ವಾಮಿ ಕೊರಗಜ್ಜ ದೈವಸ್ಥಾನ ಕೊಡಂಕೇರಿಯಲ್ಲಿ ಅ.17ಕ್ಕೆ ಅಗೇಲು ಸೇವೆ Read More »

ಸಂಪಾಜೆ : ಮಳೆ ಹಾನಿ ಯೋಜನೆಯಡಿ‌ ಅನುದಾನ ನೀಡಲು ಜಿಲ್ಲಾಧಿಕಾರಿಗೆ ಮನವಿ

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ರಾದ ಟಿ ಎಂ ಶಾಹಿದ್ ತೆಕ್ಕಿಲ್ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಅಪಾರ ಜಿಲ್ಲಾಧಿಕಾರಿ ರಾಜು ತವರನ್ನು ಬೇಟಿಯಾಗಿ ಸಂಪಾಜೆ ಗ್ರಾಮದ ಅಭಿವೃದ್ಧಿಗೆ ಮಳೆ ಹಾನಿ ಯೋಜನೆಯಡಿ ಅನುದಾನ ನೀಡಬೇಕೆಂದು ಮನವಿ ಮಾಡಲಾಯಿತು.ಸಂಪಾಜೆ ಗ್ರಾಮದಲ್ಲಿ ಮರಳಿನ ಕೊರತೆಯಿಂದಾಗಿ ಗ್ರಾಮದಲ್ಲಿ ರಸ್ತೆ ಕಾಂಕ್ರಿಟ್ ಕಾಮಗಾರಿ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಲವು ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ

ಸಂಪಾಜೆ : ಮಳೆ ಹಾನಿ ಯೋಜನೆಯಡಿ‌ ಅನುದಾನ ನೀಡಲು ಜಿಲ್ಲಾಧಿಕಾರಿಗೆ ಮನವಿ Read More »

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರನ್ನು ಭೇಟಿಯಾದ ನಿಯೋಗ

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಬೇಟಿಯಾಗಿ ಸುಳ್ಯ ತಾಲೂಕಿನ ಕರೆಂಟ್ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಯಿತು ಸುಳ್ಯದಲ್ಲಿ ತಕ್ಷಣ ಸಭೆ ಕರೆದು ಚರ್ಚೆ ಮಾಡಿ ಶೀಘ್ರ 110 ವಿದ್ಯುತ್ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು ನಿಯೋಗದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರನ್ನು ಭೇಟಿಯಾದ ನಿಯೋಗ Read More »

ಅರಂತೋಡು ಜಮಾಅತ್ ವತಿಯಿಂದ ಕನಿಷ್ಟ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರಿಗೆ ಸನ್ಮಾನ

ಅರಂತೋಡು ಬದ್ರಿಯಾ ಜುಮಾ ಮಸೀದಿ ಹಾಗೂ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಇದರ ವತಿಯಿಂದ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಒ.12 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಸನ್ಮಾನವನ್ನು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ನೆರವೇರಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಟಿ.ಎಂ ಶಾಹಿದ್

ಅರಂತೋಡು ಜಮಾಅತ್ ವತಿಯಿಂದ ಕನಿಷ್ಟ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರಿಗೆ ಸನ್ಮಾನ Read More »

ಕಾಂತಾರ ಸಿನಿಮಾಕ್ಕೆ ಭಾರೀ ವಿರೋಧ

ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ತಿಳಿಸಿದ್ದಾರೆ.ಹೊಂಬಾಳೆ ಫಿಲಂಸ್‌ ಲಾಂಛನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದ್ದು, ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ ಎಂದು ಹೇಳಿದರು.ಈ

ಕಾಂತಾರ ಸಿನಿಮಾಕ್ಕೆ ಭಾರೀ ವಿರೋಧ Read More »

ರಾಜ್ಯದಲ್ಲಿ ಬಿಸಿಯೂಟಕ್ಕೆ ಬಳಸುವ ಆಲ್ಯೂಮಿನಿಯಂ ಪಾತ್ರೆ ನಿಷೇಧಿಸಲು ರಾಜ್ಯ ಸರಕಾರ ನಿರ್ಧಾರ

ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಅಡುಗೆಗೆ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವತ್ತ ರಾಜ್ಯ ಸರಕಾರ ನಿರ್ಧಾರಕ್ಕೆ ಬಂದಿದೆ.ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ

ರಾಜ್ಯದಲ್ಲಿ ಬಿಸಿಯೂಟಕ್ಕೆ ಬಳಸುವ ಆಲ್ಯೂಮಿನಿಯಂ ಪಾತ್ರೆ ನಿಷೇಧಿಸಲು ರಾಜ್ಯ ಸರಕಾರ ನಿರ್ಧಾರ Read More »

error: Content is protected !!
Scroll to Top