ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಎಂಬ ವಿನೂತನ ಸರಣಿ ಕಾರ್ಯಕ್ರಮ ಹಮ್ಮಿಕೊಂಡು ನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದ ಹೇಳಿದರು.
ಅವರು ನ.2ರಂದು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡಕ್ಕೆ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.
ಸುಳ್ಯ ಕಸಾಪ ವತಿಯಿಂದ 7 ದಿನಗಳ ಕಾಲ ಹಮ್ಮಿಕೊಂಡ ಕಾರ್ಯಕ್ರಮ ಶ್ಲಾಘನೀಯ, ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಮತ್ತು ತಂಡಕ್ಕೆ ವೈಯಕ್ತಿವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಮುಖ್ಯ ಅತಿಥಿಯಾಗಿ ಭಾವನಾ ಸುಗಮ ಸಂಗೀತದ ಅಧ್ಯಕ್ಷ ಕೆ.ಆರ್.ಗೋಪಾಲಕೃಷ್ಣ ಅವರು ಮಾತನಾಡಿ ತಮ್ಮ ಮಕ್ಕಳಿಗೆ ಕನ್ನಡ ಭಾಷೆಯನ್ನು ಚೆನ್ನಾಗಿ ಕಲಿಸಿ ಎಂದು ಹೇಳಿದರು.ಸಂಗೀತ ಶಿಕ್ಷಕಿ ಸುಮನಾ ರಾವ್ ಪುತ್ತೂರು ಭಾಗವಹಿಸಿದ್ದರು.
ಕಸಾಪ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಕಸಾಪ ತಾಲೂಕು ಘಟಕದ ಗೌ.ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಮತ್ತು ಚಂದ್ರಮತಿ .ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯಕ್ರಮ ಸಂಯೋಜಕ ಮತ್ತು ರಂಗ ಮಯೂರಿಯ ನಿರ್ದೇಶಕ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಸಾಪ ನಿರ್ದೇಶಕ, ಕಾರ್ಯಕ್ರಮ ಸಂಯೋಜಕ ಕೇಶವ ಸಿ.ಎ.ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕಾರ್ಯಕ್ರಮ ಸಂಯೋಜಕಿ, ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ತಾಲೂಕಿನ ಹೆಸರಾಂತ ಗಾಯಕರು ಮತ್ತು ನೆಹರೂ ಮೆಮೋರಿಯಲ್ ಕಾಲೇಜ್ ಸುಳ್ಯ ಇಲ್ಲಿಯ ತುಳಸಿ ಮತ್ತು ತಂಡ ಹಾಗೂ ಸುಳ್ಯದ ರಂಗಮಯೂರಿ ಕಲಾ ಶಾಲಾ ವಿದ್ಯಾರ್ಥಿಗಳಿಂದ ಗಾನಕಲರವ ನಡೆಯಿತು.
ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ ಶಿವಾನಂದ

















