ರಿಕ್ಷಾ ಡ್ರೈವರ್ ಒಬ್ಬರು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ನಿವಾಸಿ ಬಶೀರ್ ಆತ್ಮಹತ್ಯೆ ಮಾಡಿಕೊಂಡವರು. ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯರಾಗಿರುವ ಬಶೀರ್ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಶೀರ್ ಅವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.
ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ



































