ವಿಷ ಸೇವಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತಳನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಈಕೆ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೇ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ.
ಘಟನೆಯಾಗುವ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಅಸ್ವಸ್ಥಳಾದ ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬಾಲಕಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ಈಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಹರ್ಷಿತಾಳ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top