ಬಿಸಿರೋಡು : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸಾವು

ಬಂಟ್ವಾಳದಲ್ಲಿ ಸರ್ಕಲ್‌ಗೆ ಕಾರು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಬೆಂಗಳೂರಿನಿಂದ ಮಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಬಿಸಿ ರೋಡಿನ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5ರ ವೇಳೆಗೆ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಅಪಘಾತದಿಂದ ಕಾರು ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top