ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ.ಮುಜಮ್ಮಿಲ್ ಗನಿಯ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ. ಸ್ಫೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿದೆ.
ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರಲ್ ರೂಮ್ ಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಠಾಣೆಯಲ್ಲಿದ್ದ 24 ಪೊಲೀಸರು ಹಾಗೂ 3 ನಾಗರಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದಕರಿಂದ ವಶಪಡಿಸಿಕೊಂಡ ಸ್ಪೋಟಕ ಪೊಲೀಸ್ ಠಾಣೆಯಲ್ಲಿ ಸಿಡಿದು ಆರು ಪೊಲೀಸರು ಸಾವು, 27 ಮಂದಿ ಗಂಭೀರ

















