ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ.
ಈಶ್ವರ ಗೌಡ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು.
ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಹಿಷಾಸುರ ಪಾತ್ರ ನಿರ್ವಹಿಸಿದ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು

















