ಕರ್ನಾಟಕ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನ ಸುಳ್ಯದಲ್ಲಿ ನ.20ರಂದು ಆ ರಂಭವಾಯಿತು.
ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ಆಗಮಿಸಿದೆ. ಮುಂದಿನ 5 ದಿನಗಳ ಕಾಲ ಯಾತ್ರೆಯು
ದಕ್ಷಿಣ ಕನ್ನಡ ಸಂಚಾರಿಸಲಿದೆ. ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಸುಳ್ಯದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುಳ,ಇ.ಒ ರಾಜಣ್ಣ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮಿದ್, ಭವಾನಿಶಂಕರ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ರಾಧಾಕೃಷ್ಣ ಬೊಳ್ಳೂರು, ಕೆ.ಗೋಕುಲ್‌ದಾಸ್, ಚೇತನ್ ಕಜೆಗದ್ದೆ, ರಾಜು ಪಂಡಿತ್, ಶಾಫಿ ಕುತ್ತಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ರಿಯಾಝ್ ಕಟ್ಟೆಕಾರ್ಸ್
ಸೋಮಶೇಖರ ಕೇವಳ, ಧನುಷ್ ಕುಟ್ಟಿ, ಜ್ಞಾನಶೀಲನ್ ನೆಲ್ಲಿಕುಮೇರಿ, ಅಬ್ಬಾಸ್ ಇತರರು ಉಪಸ್ಥಿತರಿದ್ದರು.
ಬಳಿಕ ಗ್ಯಾರಂಟಿ ಕಾರ್ಯಕ್ರಮಗಳ ಅರಿವು ನೀಡುವ, ಗೊಂಬೆಯಾಟ ಪ್ರದರ್ಶನಗೊಂಡಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಖಾದರ್ ಷಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ

















