ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಮತ್ತು ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷಗಳವರೆಗೆ ಸಹಾಯ / ಪ್ರೋತ್ಸಾಹ ಧನ ನೀಡಲಾಗುವುದು. ಈ ಎಲ್ಲಾ ಯೋಜನೆಗಳಿಗೂ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರದ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವವರು ಮಾನ್ಯ ಸಚಿವರು/ಮಾನ್ಯ ಶಾಸಕರು/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ



































