ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ
ನ. 21 ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂ‌ರ್ ಅಧ್ಯಕ್ಷತೆ ವಹಿಸಿ, ಸ್ಮರಣ ಸಂಚಿಕೆಯ ಸಂಪಾದಕ ನೆಲೆಯಲ್ಲಿ ಮಾತನಾಡಿದರು. ಕ್ಷೇತ್ರದ ಮೇಲೆ ಬಂದಿರುವ ಅಪಪ್ರಚಾರಕ್ಕೆ ಉತ್ತರವಾಗಿ ಸಂಚಿಕೆ ಮೂಡಿ ಬಂದಿದೆ. ಕ್ಷೇತ್ರದ ಸಮಾಜ ಸೇವಾ ಚಿಂತನೆಯ ಕುರಿತು ಸಮಗ್ರ ಮಾಹಿತಿಗಳು ಈ ಪುಸ್ತಕದಲ್ಲಿ ಇವೆ. ಹಲವಾರು ಮಂದಿ ಲೇಖಕರ ಲೇಖನವು ಮುದ್ರಣಗೊಂಡು ದಾಖಲುಗೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮಾಜಿ ಅಧ್ಯಕ್ಷ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಪಿ. ಸಿ ಜಯರಾಮ ರವರನ್ನು ಸನ್ಮಾನಿಸಲಾಯಿತು.
ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಭವಾನಿಶಂಕರ ಅಡ್ತಲೆ, ವಿಮಲಾ ರಂಗಯ್ಯ, ಮಹೇಶ್ ಕುಮಾ‌ರ್ ರೈ ಮೇನಾಲ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖ‌ರ್ ಪೈಕ, ಸಂಪಾದಕ ಮಂಡಳಿಯ ಸದಸ್ಯರಾದ ಪದ್ಮನಾಭ ಜೈನ್, ಭಾಸ್ಕರ ಅಡ್ಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸವಿತ ಸಂದೇಶ್ ಪ್ರಾರ್ಥಿಸಿದರು. ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿ,ವಂದಿಸಿದರು. ಜನಜಾಗೃತಿ ವೇದಿಕೆಯ ಸದಸ್ಯರು, ಒಕ್ಕೂಟದ ಸದಸ್ಯರು, ಭಜನಾ ಪರಿಷತ್‌ ಪದಾಧಿಕಾರಿಗಳು, ಮೇಲ್ವಿಚಾರಕರು,ಕಚೇರಿ ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top