ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿಗೆ 13 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು ಬಾಕಿ ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆಯಿತು. ಒಟ್ಟು 5651 ಮತದಾರರ ಪೈಕಿ 2573 ಮತದಾರರು ಮತ ಚಲಾಯಿಸಿದ್ದು ಶೇ.45.53% ಮತದಾನವಾಗಿದೆ. 6 ಸ್ಥಾನಗಳಿಗೆ 8 ಅಭ್ಯರ್ಥಿಗಳು ಕಣದಲ್ಲಿದ್ದರು. 6 ಜನ ಸಹಕಾರ ಭಾರತಿಯಿಂದ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು.
ನ.25 ರಂದು ಮತ ಎಣಿಕೆ ನಡೆಯಲಿದ್ದು, ನ.28 ರಂದು ಫಲಿತಾಂಶ ಘೋಷಣೆಯಾಗಲಿದೆ.
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಶೇ.45.53 ಮತದಾನ

















