ವಳಲಂಬೆ : ಮಕ್ಕಳ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದರು.
ಗುತ್ತಿಗಾರು ಪಿ.ಯಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮಾತನಾಡಿ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವ ಕೆಲಸವಾಗಿದೆ, ಛದ್ಮವೇಶದ ಮೂಲಕ ಮಕ್ಕಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಮಕ್ಕಳು ಸಾಮಾಜಿಕ ಅರಿವು ಮೂಡಿಸಿರಿವುದು ಉತ್ತಮ ಬೆಳವಣಿಗೆ ಎಂದರು. ಸಮಾಜಸೇವೆಯಲ್ಲಿ ತೊಡಗಿದವರನ್ನು ಗುರುತಿಸಿರುವುದು ಮಕ್ಕಳಿಗೂ ಪ್ರೇರಣೆ. ಹುಟ್ಟೂರಿನಲ್ಲಿ ಸಿಗುವ ಸನ್ಮಾನ ಎಲ್ಲದಕ್ಕಿಂತ ದೊಡ್ಡದು ಎಂದರು.
ಅತಿಥಿಗಳಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಶೈಲಜಾ.ಬಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಜಿತ್.ಬಿ.ಕೆ., ವಳಲಂಬೆ ಸ. ಹಿ. ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವೀಶ್ ಮೊಟ್ಟೆ, ವಳಲಂಬೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಪುರ್ಲುಮುಕ್ಕಿ, ವಳಲಂಬೆ ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಂತ್ ಕಾಜಿಮಡ್ಕ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿ ಸದಸ್ಯರಾದ ಸನತ್ ಮುಳುಗಾಡು, ಗುತ್ತಿಗಾರು ವಲಯ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ, ನಿವೃತ್ತ ಪೋಲೀಸ್ ಉಪನಿರೀಕ್ಷಕರಾದ ಸುಬ್ಬಣ್ಣ ಗೌಡ ಮಣಿಯಾನ, ನಿವೃತ್ತ ಪಿಡಿಓ ಮಣಿಯಾನ ಪುರುಷೋತ್ತಮ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ತೀರ್ಥರಾಮ ಎಚ್.ಬಿ., ವಳಲಂಬೆ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಕು| ತೃಪ್ತಿ, ವಳಲಂಬೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸ್ವಾತಿ.ಕೆ, ವಳಲಂಬೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ.ಹೆಚ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೆಂಕಟ್ ವಳಲಂಬೆ, ಸನತ್ ಮುಳುಗಾಡು ಹಾಗೂ ಸುಬ್ಬಣ್ಣ ಗೌಡ ಮಣಿಯಾನ ಇವರನ್ನು ಸನ್ಮಾನಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹಿರಿಯ ಆರೋಗ್ಯ ಸಹಾಯಕಿ ಲಲಿತಾ ಇವರು ಆರೋಗ್ಯ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಎಚ್. ಸ್ವಾಗತಿಸಿದರು. ಸಚಿನ್ ಮೊಟ್ಟೆಮನೆ ವಂದಿಸಿದರು. ಯೋಗೀಶ್ ಹೊಸೊಳಿಕೆ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ವಿಮಲಾ, ಅಂಗನವಾಡಿ ಹಿರಿಯ ವಿದ್ಯಾರ್ಥಿಗಳು, ಬಾಲವಿಕಾಸ ಸಮಿತಿ ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರು ಸಹಕರಿಸಿದರು

Leave a Comment

Your email address will not be published. Required fields are marked *

error: Content is protected !!
Scroll to Top