ಕೂತ್ಕೂಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಪಂಜ ವಲಯದ ಕುತ್ಕುಂಜ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳಾದ ರುಕ್ಮಿಣಿ ಇವರಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು, ಮಾತೃ ಶ್ರೀ ಹೇಮಾವತಿ ಅಮ್ಮನವರ ಸಹೋದರಿ ಪ್ರಿಯದರ್ಶಿನಿ ಅಮ್ಮನವರು ಹಾಗೂ ಶ್ರೇಯಂಸ್ ಕುಮಾರ್‌ ದಂಪತಿಗಳ ಉಪಸ್ಥಿತಿಯಲ್ಲಿ ಫಲಾನುಭವಿಗೆ ಮನೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೇಯಂಸ್ ಕುಮಾರ್‌ ರವರು “ಅನೇಕ ಅಸಹಾಯಕ ವ್ಯಕ್ತಿಗಳು ಯಾರ ಪೋಷಣೆಯೂ ಇಲ್ಲದೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಅತ್ಯಂತ ದುಸ್ಥಿತಿಯಲ್ಲಿ ತಮ್ಮ ಜೀವನವನ್ನು ನಡೆಸುತ್ತಿರುವುದನ್ನು ಮನಗಂಡ ಮಾತೃಶ್ರೀ ಹೇಮಾವತಿ ಅಮ್ಮನವರು ಅಂತಹ ಅಸಹಾಯಕ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಲು ಅವರ ವಾತ್ಸಲ್ಯಮಯಿ ಮನದಿಂದ ಮೂಡಿ ಬಂದ ಕಾರ್ಯಕ್ರಮವೇ ವಾತ್ಸಲ್ಯ ಕಾರ್ಯಕ್ರಮ ಎಂದು ಮಾತನಾಡಿ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸುತ್ತಾ ಶುಭ ಹಾರೈಸಿದರು .
ಹಾಗೂ ಈ ಕಾರ್ಯಕ್ರಮದಲ್ಲಿ ಪಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಿಲಿಕಾನ್‌ ಛೇಂಬರ್‌ನ್ನು ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್‌ ಅಭಿವೃಧ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳಿಂದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾ ಪೂಜೆ ಮತ್ತು ಪ್ರಾರ್ಥನಾ ಸೇವೆಯನ್ನು ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ದ.ಕ 02 ಜಿಲ್ಲೆಯ ನಿರ್ದೇಶಕರಾದ ಶ್ರೀ ಎ.ಬಾಬು ನಾಯ್ಕ ಹಾಗೂ ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ, ಒಕ್ಕೂಟದ ಅಧ್ಯಕ್ಷರು ಶ್ರೀಮತಿ ನಳಿನಿ, ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ವಿಜಯಲಕ್ಷ್ಮಿ, ಲಯನ್ಸ್ ಕ್ಲಬ್‌ ಅಧ್ಯಕ್ಷರಾದ ಶ್ರೀ ಕುಮಾರಸ್ವಾಮಿ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ನಾಗೇಶ್ ಕಿನ್ನಿ ಕಮಾರಿ, ಪಂಜ ಒಕ್ಕೂಟದ ವಲಯಾಧ್ಯಕ್ಷರಾದ ಶ್ರೀ ಧರ್ಮಪಾಲ ಕಣಕಲ್ ಹಾಗೂ ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕಾರ್ಯಾಪ್ಪ ಗೌಡ ಚಿದ್ಗಲ್, ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಹಾಗೂ ಸದಸ್ಯರು ,ಪಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಜಯಂತ ಸರ್, csc ತಾಲೂಕು ನೋಡಲ್ ಅಧಿಕಾರಿ ಶ್ರೀ ಹೇಮಂತ್, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಲಕ್ಷ್ಮಿ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಪಂಜ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸರ್ವ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಭಜನಾ ಪರಿಷತ್ ಪಂಜ ವಲಯದ ಅಧ್ಯಕ್ಷರುಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top