ಪ್ರಧಾನಿ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಗಣ್ಯರು

ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಗಣ್ಯರು ಅವರನ್ನು ಸ್ವಾಗತಿಸಿದರು.
ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನ‌ರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು ಪ್ರಧಾನಿಗಳನ್ನು ಸ್ವಾಗತಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top