ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು : ಸಿಎಂ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು ಇದನ್ನು ಸಚಿವ ಸಂಪುಟ ಸಭೆಯಲ್ಲಿ ಇಟ್ಟು ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಆರ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾಗಮಂಡಲದಲ್ಲಿ ನಾಡಗೌಡ ಸಮುದಾಯ ಭವನಕ್ಕೆ ಹಿಂದೆ 1 ಕೋ.ರೂ. ಒದಗಿಸಲಾಗಿತ್ತು. ಪ್ರಸ್ತುತ ಹೆಚ್ಚುಮ 50 ಲಕ್ಷ ರೂ.ಬೇಡಿಕೆ ಇದ್ದು ಅದನ್ನು ಈಡೇರಿಸಲಾಗುವುದು ಎಂದರು.
ಕರ್ನಾಟಕದಲ್ಲಿ 230 ಸಣ್ಣಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಹೇಳಿದರು.
ಜನಸಂಖ್ಯೆ ಕಡಿಮೆಯೆಂದು ಹಿಂಜರಿಕೆ ಬೇಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಅರೆಭಾಷೆ ಸಂಘಟನೆಯವರು ತಮ್ಮ ಚಟುವಟಿಕೆಗಳನ್ನು ನಡೆಸಲು ನಿವೇಶನದ ಅವಶ್ಯಕತೆಯಿದೆ ಎಂದು ಮನವಿ ಸಲ್ಲಿಸಿದ್ದಾರೆ. ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಲಭ್ಯತೆ ನೋಡಿಕೊಂಡು ನಿವೇಶನ ನೀಡಲಾಗುವುದು ಎಂದು ಹೇಳಿದರು.ಕೆ.ಆರ್.ಗಂಗಾಧಾರ(ಅರೆಭಾಷೆ ಸಾಹಿತ್ಯ ಹಾಗೂ ಶೈಕ್ಷಣಿಕ), ಯು. ಪಿ.ಶಿವಾನಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ), ಡಿ.ಎಸ್.ಆನಂದ (ಅರೆಭಾಷಿಕರ ಸಂಘಟನೆ ಮತ್ತು ಆಡಳಿತ) ಅವರಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾಗುವ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುತ್ತಿದೆ.

ಕರ್ನಾಟಕ ವಿಧಾನಸಭಾಧ್ಯಕ್ಷ ಡಾ.ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಪೊನ್ನಣ್ಣ, ಮಡಿಕೇರಿ ಶಾಸಕರಾದ ಡಾ. ಮಂಥರ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಕುಮಾರ್, ನಿರ್ದೇಶಕಿ ಕೆ.ಎಂ. ಗಾಯತ್ರಿ, ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಅರೆ ಭಾಷೆ ಅಕಾಡೆಮಿ ಕುರಿತಾಗಿ ಸುದ್ದಿ ಮೀಡಿಯಾ ಕ್ರಿಯೇಶನ್ಸ್ ತಯಾರಿಸಿದ ಸ ಸಾಕ್ಷ್ಯಚಿತ್ರವನ್ನು ಡಿ.ಕೆ.ಶಿವಕುಮಾರ್ ಹಾಗೂ ಐನ್ ಮನೆ ಸಾಕ್ಷ್ಯಚಿತ್ರವನ್ನು ಶಾಸಕ ಮಂಥರ್ ಗೌಡ ಬಿಡುಗಡೆ ಮಾಡಿದರು.

Leave a Comment

Your email address will not be published. Required fields are marked *

error: Content is protected !!
Scroll to Top