ಚೊಕ್ಕಾಡಿ : ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ, ದಿನಾಂಕ 14-12-2025 ರಂದು ಚೊಕ್ಕಾಡಿ ಪರಿಸರದ ಅಂಗಡಿಗಳ ಮುಂದಿದ್ದ ಕಳೆಗಳನ್ನು ಕಡಿದು ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಜನಸಂಚಾರ ಹೆಚ್ಚಿರುವ ಸ್ಥಳಗಳಲ್ಲಿ ಕಾಡು ಬೆಳದು ಸಾರ್ವಜನಿಕರಿಗೆ ನಡೆದಾಡಲು ಅಸೌಕರ್ಯ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳೆಗಳನ್ನು ಕಡಿದು ಪರಿಸರವನ್ನು ಸ್ವಚ್ಛಗೊಳಿಸಿ ಊರನ್ನು ಸುಂದರಗೊಳಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೇ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ, ಆರೋಗ್ಯಕರ ಹಾಗೂ ಸ್ವಚ್ಛ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸ್ವಚ್ಛತಾ ಜಾಗೃತಿ ಸಂದೇಶವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಸ್ಥಾಪಕಾಧಕ್ಷೆ ಉಷಾಲತಾ ಪಡ್ಪು , ಮಾಜಿ ಕಾರ್ಯದರ್ಶಿ ಮಧುಶ್ರೀ ಕೇನಡ್ಕ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯೆಯರು ಸಕ್ರಿಯವಾಗಿ ಭಾಗವಹಿಸಿದರು.

ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಯಿತು.

Leave a Comment

Your email address will not be published. Required fields are marked *

error: Content is protected !!
Scroll to Top