ದೈವರಾಧನೆ ತುಳುನಾಡಿನ ದೊಡ್ಡ ಶಕ್ತಿಯಾಗಿದ್ದು ಇದು ದೈವರಾಧಕರಾದ ನಮ್ಮಲ್ಲಿ ಒಗ್ಗಟನ್ನು ಹೆಚ್ಚಿಸುತ್ತದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಅಂಗವಾಗಿ ಇಲ್ಲಿ
ದ. 28 ರಂದು ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಬಾಳೆಕಜೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ಪೂವಪ್ಪ ಕಣಿಯೂರು ಧಾರ್ಮಿಕ ಉಪನ್ಯಾಸ ನೀಡಿದರು.
ದೈವಜ್ಞರಾದ ಕಲ್ಲಾರು ಬಾಲಕೃಷ್ಣ, ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು, ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ದೈವಸ್ಥಾನದ ವ್ಯವಸ್ಥಾಪನಾ ಟ್ರಸ್ಟ್ ಅಧ್ಯಕ್ಷ ಕೆ ಕೆ ನಾರಾಯಣ, ಜಿ. ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಪಂಜಿಕೋಡಿ, ಶಶಿಧರ ದೊಡ್ಡಕುಮೇರಿ, ದೈವಸ್ಥಾನದ ಗೌರವಾಧ್ಯಕ್ಷರಾದ ಪದ್ಮಯ್ಯ ಗೌಡ ಪಡ್ಪು ಕಮಲಾಕ್ಷ ಪಡ್ಪು ವೇದಿಕೆಯಲ್ಲಿದ್ದರು.
ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷ ಸಂತೋಷ್ ಕೊತ್ತಮಟ್ಟೆ ಅವರು ಸ್ವಾಗತಿಸಿ , ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಕ್ ಕುತ್ತಮೊಟ್ಟೆ ವಂದಿಸಿದರು. ಕುಮಾರಿ ಸುಷ್ಮಾ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೆ ವಿಶೇಷ ಸಹಕಾರ ನೀಡಿದ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ದೈವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಒದಗಿಸಿದ ಶಾಸಕಿ ಕುಮಾರಿ ಭಾಗೀರಥಿ ಅವರನ್ನು ಗೌರವಿಸಲಾಯಿತು. ಜೀರ್ಣೋದ್ಧಾರ ಸಮಿತಿ ವ್ಯವಸ್ಥಾಪನ ಸಮಿತಿಯ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.
ಅಲೆಟ್ಟಿ ಕುರಿಂಜ ತರವಾಡಿನ ರಾಮ ಮಣಿಯಾಣಿ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ 7:00 ಯಿಂದ 8:00 ರಾ ಶುಭ ಮುಹೂರ್ತದಲ್ಲಿ ಶ್ರೀ ಮಹಾವಿಷ್ಣು ದೈವದ ಪುನರ್ ಪ್ರತಿಷ್ಟ ಕಾರ್ಯಕ್ರಮ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.
ಪುನರ್ ಪ್ರತಿಷ್ಠೆ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ದೈವದ ತಂಬಿಲ ನಡೆಯಿತು.
ನೂರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.



































