ಕೆ.ವಿ.ಜಿ. ಸುಳ್ಯ ಹಬ್ಬ: ಕೆ.ವಿ.ಜಿ. ಸಾಧಶ್ರೀ ಪ್ರಶಸ್ತಿ ಪ್ರದಾನ

ಸುಳ್ಯ : ವಿದ್ಯಾರ್ಥಿಗಳನ್ನು, ಯುವಕರನ್ನು ಸದಾ ಬೆಂಬಲಿಸುತ್ತಿದ್ದ ಡಾ.ಕುರುಂಜಿ ವೆಂಕಟ್ರಮಣ ಗೌಡರು ಯುವ ಜನಾಂಗಕ್ಕೆ ಸದಾ ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಎರಡು ದಿನಗಳ ಕಾಲ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆದ ಕೆವಿಜಿ ಸುಳ್ಯ ಹಬ್ಬದಲ್ಲಿ ಕೆವಿಜಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಹಾಗೂ ಕೆವಿಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತಮ್ಮ ವಿದ್ಯಾರ್ಥಿ ಜೀವನದಿಂದಲೇ ಕೆವಿಜಿ ಅವರ ಪ್ರೀತಿ, ಕಾಳಜಿಯನ್ನು ಹತ್ತಿರದಿಂದ ಬಲ್ಲವನಾಗಿದ್ದೆ ಎಂದ ಅವರು ಇಡೀ ಯುವ ಸಮುದಾಯಕ್ಕೆ ಅವರು ಮಾರ್ಗದರ್ಶಕರಾಗಿದ್ದರು, ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿದ್ದರು ಎಂದರು.
ಎಒಎಲ್‌ಇ ಅಧ್ಯಕ್ಷ ಹಾಗೂ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ.ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತೀ ಹೆಚ್ಚು ಸದಸ್ಯರು, ಸಾರ್ವಜನಿಕರು ಭಾಗವಹಿಸುವ ಮೂಲಕ ಈ ಬಾರಿಯ ಸುಳ್ಯ ಹಬ್ಬ ದಾಖಲೆ‌ ಬರೆದಿದೆ ಎಂದು ಹೇಳಿದರು. ಡಾ.ಕೆವಿಜಿ ಅವರ ಬಗ್ಗೆ ಜನತೆಗೆ ಇರುವ ಪ್ರೀತಿ, ಗೌರವ ಹಾಗು ಸುಳ್ಯ ಹಬ್ಬ ಸಮಿತಿಯ ಪ್ರಯತ್ನದಿಂದ ಈ ರೀತಿಯಲ್ಲಿ ಸುಳ್ಯ ಹಬ್ಬ ಯಶಸ್ಸಿನೆಡೆಗೆ ಮುನ್ನಡೆಯಲು ಸಾಧ್ಯವಾಗಿದೆ ಎಂದರು.
ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಬಾಲಚಂದ್ರ ಗೌಡ
ಕೆವಿಜಿ ಸಂಸ್ಮರಣಾ ಭಾಷಣ ಮಾಡಿ ವಿಶೇಷ ವ್ಯಕ್ತಿತ್ವವನ್ನು ನಾನು ಕೆವಿಜಿಯವರಲ್ಲಿ ಕಂಡಿದೆ.ಹಂತ ಹಂತವಾಗಿ ಮೇಲೆದಿದವರು ಕುರುಂಜಿಯವರು ಎಂದು ಹೇಳಿದರು. ಹಿರಿಯರಾದ ಎಸ್.ಎಂ.ಬಾಪೂ ಸಾಹೇಬ್ ಮತ್ತು ಡಾ.ಯು.ಪಿ. ಶಿವಾನಂದ ಅವರಿಗೆ ಕೆವಿಜಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ ವಿಶ್ವನಾಥ, ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ‌.ಎನ್‌‌.ಎ.ಜ್ಞಾನೇಶ್, ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಕೋಶಾಧಿಕಾರಿ ಚಂದ್ರಾವತಿ ಬಡ್ಡಡ್ಕ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ ವಿಶ್ವನಾಥ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಚಂದ್ರಾವತಿ ಬಡ್ಡಡ್ಕ ಹಾಗೂ ಚಂದ್ರಮತಿ ಕೆ. ಸಾಧನಾಶ್ರೀ ಪ್ರಶಸ್ತಿ ವಿಜೇತರ ಪರಿಚಯ ಮಾಡಿದರು. ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ, ಬಳಿ
ರಾತ್ರಿ ಚಾ ಪರ್ಕ ಕಲಾವಿದರು ಕುಡ್ಲ ಅಭಿನಯಿಸಿದ ‘ಪುದರ್ ದೀತಿಜಿ’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top