ಕುಕ್ಕುಜಡ್ಕ : ಸುಳ್ಯ ತಾಲೂಕು 28ನೇ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಕನ್ನಡ ಭುವನೇಶ್ವರಿಯ ಮೆರವಣಿಗೆಯೊಂದಿಗೆ ಚಾಲನೆ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ನೇತ್ರತ್ವದಲ್ಲಿ ಕುಕ್ಕುಜಡ್ಕದಲ್ಲಿ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಸುಳ್ಯ ತಾಲೂಕಿನ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ ಕುಕ್ಕುಜಡ್ಕದಿಂದ ಶಾಲೆಯ ತನಕ ನಡೆಯಿತು. ತಹಶೀಲ್ದಾರ್ ಎಂ.ಮಂಜುಳ ಮೆರವಣಿಗೆಗೆ ಚಾಲನೆ ನೀಡಿದರು. ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷ, ಸಾಹಿತಿ ಕೆ.ಆರ್.ತೇಜಕುಮಾರ್ ಬಡ್ಡಡ್ಕ ಅವರನ್ನು ಆಕರ್ಷಕ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಶಾಲೆಯ ತನಕ ಕರೆತರಲಾಯಿತು.ಜಿಲ್ಲಾ […]










