ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನ ಸಾವು

ಮಂಗಳೂರಿನಿಂದ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 65 ವರ್ಷದ ಪ್ರಯಾಣಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬಾಗಲಕೋಟೆ ಜಿಲ್ಲೆಯ ಕೆರೂರ ಪಟ್ಟಣದಲ್ಲಿ ನಡೆದಿದೆ. ಬಸ್ ಕೆರೂರ ನಿಲ್ದಾಣಕ್ಕೆ ತಲುಪಿದಾಗ, ಕಂಡಕ್ಟರ್ ಪ್ರಯಾಣಿಕನನ್ನು ಎಬ್ಬಿಸಲು ಹೋದಾಗ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತರು ಮುದ್ದೇಬಿಹಾಳ ಪಟ್ಟಣದ ನಿವಾಸಿ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಕೆರೂರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕ್ಕಾಗಿ ಮುದ್ದೇಬಿಹಾಳ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top