ಕುತ್ಕೂಂಜ : ಮ್ಯಾಟ್ ಕಬಡ್ಡಿ ಪಂದ್ಯಾಟದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ

ಶಿವಾಜಿ ಯುವಕ ಮಂಡಲ (ರಿ.) ಕೂತ್ಕುಂಜ, ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.)
ಇವರ ಸಹಭಾಗಿತ್ವದಲ್ಲಿ ಪ್ರೋ ಮಾದರಿಯ ಸುಳ್ಯ ವಿಧಾನಸಭಾ ಕ್ಷೇತ್ರದ 8 ತಂಡಗಳ ಸೂರ್ಯ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ.10 ರಂದು ಕೂತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ನಡೆಯಿತು.
ಸಂಜೆ ಸಭಾ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಶಾಸಕಿ ಕು.ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಮೂವತ್ತೈದು ವರ್ಷಗಳಿಂದ ಶಿವಾಜಿ ಯುವಕ ಮಂಡಲ ಅನೇಕ ಸಾಮಾಜಿಕ ಸೇವೆಗಳೊಂದಿಗೆ ಗುರುತಿಸಿ ಕೊಂಡಿದೆ.ಮುಂದೆ ಯುವಕ ಮಂಡಲ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಿ”. ಎಂದು ಶುಭಹಾರೈಸಿದರು.
ಶಿವಾಜಿ ಯುವಕ ಮಂಡಲದ ಅಧ್ಯಕ್ಷ ಆದರ್ಶ ಚಿದ್ದಲ್ಲು ಸಭಾಧ್ಯಕ್ಷತೆ ವಹಿಸಿದ್ದರು.ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ,ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ಕಾನತ್ತೂ‌ರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ ನೆಕ್ರಾಜೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಯುವ ಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಮಹಾರಾಷ್ಟ್ರ ಗೌಡರ ಉನ್ನತೀಕರಣ ಸಂಸ್ಥೆಯ ಸಾಂಸ್ಕೃತಿಕ ಸಮಿತಿ ಉಪಾಧಕ ಸಿಂಧೂರ್ ರಾಜೇಶ್ ಗೌಡ, ಪುತ್ತೂರು ಇತರರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top