ಮಾನಹಾನಿ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಖಾಸಗಿ ದೂರು ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಯತ್ನಾಳ್ ಗೈರು ಹಾಜರಾಗಿದ್ದರಿಂದ ಈ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಜ.20ಕ್ಕೆ ಮುಂದೂಡಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಶಿವಾನಂದ ಎಸ್.ಪಾಟೀಲ್ ಆರೋಪಿಸಿ ಈ ದೂರು ದಾಖಲಿಸಿದ್ದರು.
ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

















