ಸನ್ಮಾನವೆಂಬುದು ಸಮಾಜದ ನಾಗರಿಕ ಕಾರ್ಯಗಳಲ್ಲಿ ಅದು ಒಂದು : ಕೆ.ಆರ್.ಜಿ

ಸನ್ಮಾನ ಎಂದು ಸಮಾಜದ ನಾಗರೀಕ ಕಾರ್ಯಗಳಲ್ಲಿ ಒಂದು ಎಂದು ರಾಷ್ಟ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅರಂತೋಡು ನೆಹರು‌ ಸ್ಮಾರಕ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಹೇಳಿದರು.
ತೊಡಿಕಾನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಪ್ರಯುಕ್ತ ಗುರು ವಂದನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಅಭಿನಂದನಾ ಭಾಷಣ ಮಾಡಿದರು.
ಶಿಕ್ಷಕ ವ್ರತ್ತಿಗೆ ಹಲವು ವರ್ಷಗಳ ಅಷ್ಟಾಗಿ ಜನರು ಇಷ್ಟ ಪಡುತ್ತಿರಲಿಲ್ಲ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಗೌರಯುತ ಹುದ್ದೆಯಾಗಿದೆ.ಶಾಲಾ ಆರಂಭ ಕಾಲದ ಶಿಕ್ಷಕರ ಸೇವೆ ಅತ್ಯಂತ ಶ್ರೇಷ್ಠವಾದು ಎಂದು ಹೇಳಿದರು‌.
ಅಮೃತ ಮಹೋತ್ಸವ
ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು ಕೆ, ಗ್ರಾಮ ಪಂಚಾಯತ್‌ ಅಧ್ಯಕ್ಷ ಕೇಶವ ಅಡ್ತಲೆ, ಉಪಾಧ್ಯಕ್ಷರು ಭವಾನಿ ಚಿಟ್ಟನ್ನೂರು, ದಾನಿಗಳಾದ ಪ್ರೇಮಾ ವಸಂತ ಭಟ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಸೌಮ್ಯ ಭಟ್, ಅಮೃತ ಮಹೋತ್ಸವ ಸಮಿತಿ ಉಪಾಧ್ಯಕ್ಷ ನಾರಾಯಣ ಕೆ ಕೆ ವೇದಿಕೆಯಲ್ಲಿದ್ದರು. ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಗುರುವಂದನೆ ಸನ್ಮಾನ ನಡೆಯಿತು.
ಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಸುನೀತ ವಂದಿಸಿದರು. ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top