ಅರಂಬೂರಿನಲ್ಲಿ ಯುವಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆದಿದ್ದಾನೆ ಎನ್ನಲಾಗಿದ್ದು, ಆರೋಪಿಯ ವಿರುದ್ಧ ಸುಳ್ಯ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಪೊಲೀಸರು ಆರೋಪಿ ಅಬ್ದುಲ್ ಬಾಷಿತ್ (19) ಎಂಬಾತನ್ನು ಬಂಧಿಸಿ ಪೋಕ್ಸ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಅರಂಬೂರು : ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ

















