ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಸೋಮಶೇಖರ್ ರಾಜಿನಾಮೆ

ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಸೋಮಶೇಖರ್ ಕೊಯಿಂಗಾಜೆ ರಾಜಿನಾಮೆ ನೀಡಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಬಗ್ಗೆ ಮಾಹಿತಿ ನೀಡಿದ ಅವರು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪಿ ಸಿ ಜಯರಾಮರಿಗೆ ಸಂಪಾಜೆ ವಲಯ ಕಾಂಗ್ರೇಸ್ ಘಟಕದ ಅಧ್ಯಕ್ಷನಾದ ನಾನು ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ನಾನು ಸುಮಾರು ಇಪ್ಪತ್ತೆಂಟು ವರ್ಷಗಳಿಂದ ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಮತ್ತು ಉಳಿವಿಗಾಗಿ ಪಕ್ಷದ ಕಾರ್ಯಕರ್ತರ ಸಂಪೂರ್ಣ ಸಹಕಾರದಿಂದ ಯಶಸ್ವಿಯಾಗಿ ಮುನ್ನಡೆಸಿದ ಹೆಮ್ಮೆ ನನಗಿದೆ. ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುಣಾವಣೆಗಳು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ತಯಾರಿ ಮಾಡುವ ಜವಾಬ್ದಾರಿ ಪಕ್ಷದ ಅಧ್ಯಕ್ಷರಾದ ನನ್ನ ಮೇಲಿದ್ದು, ನನಗೆ ನನ್ನ ವೈಯುಕ್ತಿಕ ಸಮಸ್ಯೆ ಹಾಗೂ ಆರ್ಥಿಕ ಸಮಸ್ಯೆ ಅಲ್ಲದೆ ಆರೋಗ್ಯದ ಸಮಸ್ಯೆಯಿಂದ ಪಕ್ಷವನ್ನು ಮುನ್ನಡೆಸುವ ಉತ್ಸವ ಇರುವುದಿಲ್ಲ. ಆದುದರಿಂದ ಮುಂದೆ ಒಬ್ಬ ಸಮರ್ಥ ನಾಯಕನಿಗೆ ಈ ಜವಾಬ್ದಾರಿ ನೀಡುವ ಉದ್ದೇಶದಿಂದ ನನ್ನ ವಲಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜಿನಾಮೆ ಸಲ್ಲಿಸಿದ್ದೇನೆ. ಮುಂದೆ ಪಕ್ಷ ಇಲ್ಲಿ ಬೆಳೆಯಬೇಕು ಮತ್ತು ಉಳಿಯಬೇಕಾಗಿದೆ. ನನ್ನ ರಾಜಿನಾಮೆಯನ್ನು ತಕ್ಷಣ ಅಂಗೀಕರಿಸಿ, ಸೂಕ್ತ ವ್ಯಕ್ತಿಗೆ ಅವಕಾಶ ಮಾಡಿಕೊಟ್ಟು ನನಗೆ ಈ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕೆಂದು ತಿಳಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top