ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ದಿ. 26 ಜನವರಿ 2026ರಂದು ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು ಶ್ರೀ .ಶುಭಕರ ಬಿ.ಸಿ ಹಾಗೂ ಸಂಚಾಲಕಿ ಶ್ರೀಮತಿ. ಗೀತಾಂಜಲಿ ಟಿ.ಜಿ ,ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧರಾದ ಹರಿಶ್ಚಂದ್ರ ಬೊಳುಗಲ್ಲು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ಶುಭ ಹಾರೈಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪುಟಾಣಿಗಳಿಗೆ ಉಡುಗೊರೆಯನ್ನು ನೀಡಿ ಸಂತೈಸಿದರು. ಇದೇ ಶುಭ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮುಖ್ಯ ಅತಿಥಿಗಳನ್ನು ಶಾಲಾ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ನಂತರ ವಿದ್ಯಾರ್ಥಿಗಳು ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮನ ಗೆದ್ದರು. ಕಾರ್ಯಕ್ರಮದ ಮೂಲಕ ಸಂವಿಧಾನದ ಮಹತ್ವ ಮತ್ತು ದೇಶಭಕ್ತಿಯ ಸಂದೇಶವನ್ನು ನೀಡಲಾಯಿತು.
ಕಾರ್ಯಕ್ರಮದ ಕೊನೆಗೆ ಸಿಹಿ ವಿತರಿಸಲಾಯಿತು.
ಕಾರ್ಯಕ್ರಮವನ್ನು ಶ್ರೀಮತಿ.ನಿರ್ಮಲಾ ಸ್ವಾಗತಿಸಿ , ಶ್ರೀಮತಿ.ಫಬಿಧ ವಂದಿಸಿ ನಿರೂಪಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top