ನಾಳೆಯಿಂದ(ಫೆ.1) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ ಆರಂಭ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.24 ರಿಂದ ಫೆ.9 ರ ತನಕ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ. 1 ರಿಂದ ಫೆ. 5 ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ತಿಳಿಸಿದ್ದಾರೆ.ಫೆ.1 ರಂದು ಪೂರ್ವಾಹ್ನ 8.30 ರಿಂದ ವೇದ ಪಾರಾಯಣಗಳ ಆರಂಭ, ಮಧ್ಯಾಹ್ನ ಮಹಾಪೂಜೆ. ಅನ್ನಸಂತರ್ಪಣೆ. ಸಂಜೆ ತಂತ್ರಿಗಳ ಆಗಮನ, ಸಂಜೆ 7 ಕ್ಕೆ ಧ್ವಜಾರೋಹಣ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಫೆ.1 ಸಂಜೆ ಗಂಟೆ 6 ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ವಿಶ್ವ ಕಲಾನಿಕೇತನ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಟರ್ (ರಿ) ಪುತ್ತೂರು ಇದರ ಪಂಜ ಶಾಖೆಯವರಿಂದ ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ. ರೈ ಮತ್ತು ವಿದುಷಿ ಸ್ವಸ್ತಿಕ ಆ‌ರ್. ಶೆಟ್ಟಿ ನಿರ್ದೇಶನದ ನೃತ್ಯ ವೈಭವ. ರಾತ್ರಿ 9:30 ರಿಂದ ರಥ ಬೀದಿಯಲ್ಲಿ ಸಸಿಹಿತ್ತು ಶ್ರೀ ಭಗವತೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ ತುಳು ಯಕ್ಷಗಾನ ಬಯಲಾಟ ವಿನೂತನ ಶೈಲಿಯ ನವರಸಭರಿತ ಹಾಸ್ಯಮಯ ಪ್ರಸಂಗ ‘ಬಂಟಮಲೆ ಭಾರ್ಗವಿ ಎಂಬ ತುಳು ಕಥಾ ಪ್ರಸಂಗ ಪ್ರದರ್ಶನ ಗೊಳ್ಳಲಿದೆ.ಫೆ.2 .ರಂದು ಪೂರ್ವಾಹ್ನ ಗಂಟೆ 7.ಕ್ಕೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತರುವುದು, ರುದ್ರ ಹವನ ಮಹಾಪೂಜೆ, ನಿತ್ಯ ಬಲಿ, ಅನ್ನಸಂತರ್ಪಣೆ. ಸಂಜೆ ಗಂಟೆ 6ಕ್ಕೆ ಶ್ರೀ ರಕೇಶ್ವರಿ ದೈವದ ಸನ್ನಿಧಿಯಲ್ಲಿ ತಂಬಿಲ ಸೇವೆ ಹಾಗೂ ಭಂಡಾರ ತೆಗೆಯುವುದು. ರಾತ್ರಿ 7:30ಕ್ಕೆ ದೇಗುಲದಲ್ಲಿ ಮಹಾಪೂಜೆ. ನಿತ್ಯ ಬಲಿ, ಅನ್ನಸಂತರ್ಪಣೆ . ರಾತ್ರಿ 8ರಿಂದ ಶ್ರೀ ರಕೇಶ್ವರಿ ದೈವದ ನೇಮ.ಫೆ.3 ರಂದು ಪೂರ್ವಾಹ್ನ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿ ಹಸಿರು ಕಾಣಿಕೆಗಳನ್ನು ತರಲು ಹೊರಡುವುದು. ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ ಅನ್ನಸಂತರ್ಪಣೆ ಸಂಜೆ ಗಂಟೆ 4 ರಿಂದ ವಿವಿಧ ಊರುಗಳಿಂದ ಸಂಗ್ರಹಣೆ ಮಾಡಿದ ಹಸಿರು ಕಾಣಿಕೆಗಳನ್ನು ಮೆರವಣಿಗೆಯಲ್ಲಿ ಪುತ್ಯ ಸತ್ಯಕಟ್ಟೆಯಿಂದ ದೇವಳಕ್ಕೆ ತರುವುದು. ಸಂಜೆ ಉಗ್ರಾಣ ತುಂಬಿಸುವುದು. ಮಹಾಪೂಜೆ ದಂಡಮಾಲೆ ಹಾಕಿ ಬಲಿ ಹೊರಡುವುದು, ಬೇತಾಳಗಳು ಇಳಿಯುವುದು, ಅನ್ನಸಂತರ್ಪಣೆ ನಡೆಯಲಿದೆ.ಫೆ.4 ರಂದು ಪೂರ್ವಾಹ್ನ ಮಹಾ ಪೂಜೆ, ಶ್ರೀ ದೇವರ ಉತ್ಸವ, ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ಉತ್ಸವ, ಮಹಾಪೂಜೆ ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ.ಫೆ.5 ರಂದು ಪೂರ್ವಾಹ್ನ ಮಹಾ ಪೂಜೆ,ಶ್ರೀ ದೇವರ ಉತ್ಸವ, ಪೂರ್ವಾಹ್ನ 11.30 ರಿಂದ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ.ರಾತ್ರಿ ದೀಪೋತ್ಸವ, ಮಹಾಪೂಜೆ, ಶ್ರೀ ದೇವರ ಉತ್ಸವ, ಬೀದಿಕಟ್ಟೆ ಪೂಜೆ, ಕಾಚುಕುಜುಂಬ, ಶಿರಾಡಿ, ರುದ್ರಚಾಮುಂಡಿ ದೈವಗಳ ನರ್ತನ ಸೇವೆ, ವಸಂತ ಕಟ್ಟೆಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ. ಫೆ.6 ಪೂರ್ವಾಹ್ನ ಮಹಾ ಪೂಜೆ, ಶ್ರೀ ದೇವರ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರ ಉತ್ಸವ, ರಾತ್ರಿ ಗಂಟೆ 11 ರಿಂದ ಬ್ರಹ್ಮ ರಥೋತ್ಸವ, ಕಾಚುಕುಜುಂಬ ದೈವದ ನರ್ತನ ಸೇವೆ. ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ.ಪೇ.7ರಂದು ಮುಂಜಾನೆ ಕವಾಟೋದ್ಘಾಟನೆ, ದೇವರಿಗೆ ಅಭಿಷೇಕ, ಮಹಾಪೂಜೆ, ಪೂರ್ವಾಹ್ನ 8ಕ್ಕೆ ಗರಡಿ ಬೈಲು ಮೂಲನಾಗನ ಕಟ್ಟೆಯಲ್ಲಿ ತಂಬಿಲ ಸೇವೆ. ಪೂರ್ವಾಹ್ನ ಗಂಟೆ 9 ರಿಂದ ಬಲಿ ಹೊರಟು, ಕಾಚುಕುಜುಂಬ ದೈವದ ನರ್ತನ ಸೇವೆಯೊಂದಿಗೆ ನಾಗತೀರ್ಥ ಜಳಕದ ಹೊಳೆಯಲ್ಲಿ ಶ್ರೀ ದೇವರ ಅವಧೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ, ಅನ್ನಸಂತರ್ಪಣೆ, ಅಪರಾಹ್ನ 3 ಕ್ಕೆ ದೇಗುಲದ ಭಂಡಾರ ಮನೆಯಿಂದ ಶ್ರೀ ಕಾಚುಕುಜುಂಬ ಮತ್ತು ಶ್ರೀ ಉಳ್ಳಾಕುಲು ದೈವಗಳ ಭಂಡಾರವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿಬೈಲಿಗೆ ಹೋಗಿ ಧ್ವಜಾರೋಹಣ, ಸಂಜೆ ಗಂಟೆ 6 ರಿಂದ ಶ್ರೀ ಉಳ್ಳಾಕು ದೈವದ ನೇಮ. ಅನ್ನಸಂತರ್ಪಣೆ,ರಾತ್ರಿ ಗಂಟೆ 8 ರಿಂದ ಶ್ರೀ ಕಾಚುಕುಜುಂಬ ದೈವದ ನೇಮ, ಪ್ರಸಾದ ವಿತರಣೆ,ಧ್ವಜಾವರೋಹಣ.ದೈವದ ಭಂಡಾರವನ್ನು ಮೆರವಣಿಗೆಯಲ್ಲಿ ದೇಗುಲದ ಭಂಡಾರ ಮನೆಗೆ ತರುವುದು8.ರಂದು ಮುಂಜಾನೆ ಮಹಾ ಪೂಜೆ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ. ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಪುತ್ಯದಿಂದ ಶಿರಾಡಿ ದೈವದ ಭಂಡಾರ ತರುವುದು ಹಾಗೂ ರುದ್ರ ಚಾಮುಂಡಿ ದೈವದ ಭಂಡಾರ ತೆಗೆಯುವುದು.ಫೆ.9 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ, ಅನ್ನಸಂತರ್ಪಣೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳುಫೆ.3ರಂದು ಸಂಜೆ ಗಂಟೆ 7ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಪದಯಾನ ತಂಡ ಪದ್ಯಾಣ ಇವರಿಂದ ವಿದುಷಿ ಶ್ರೀಮತಿ ಪ್ರಣತಿ ಚೈತನ್ಯ ಪದ್ಯಾಣ ನಿರ್ದೇಶನದ ಭರತನಾಟ್ಯ.ಫೆ.4 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಜೆ ಗಂಟೆ 6 ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ.ಫೆ.5 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜೀವನ್ ಬೆಳ್ಳಾರೆ ನಿರ್ದೇಶನದ ನೃತ್ಯ ಸಂಭ್ರಮ ಡಾನ್ಸ್ ಅಂಡ್ ಬೀಟ್ಸ್ ಪಂಜ, ಬೆಳ್ಳಾರೆ, ಕೈಕಂಬ,ಸುಬ್ರಹ್ಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ ರಾತ್ರಿ ಗಂಟೆ 7 ರಿಂದ ಕೋಟಿ ಚೆನ್ನಯ ಗರಡಿ ಮೈದಾನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ (ರಿ) ರವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top