ಮಹಿಳಾ ಪ್ರೀಮಿಯರ್ ಲೀಗ್ 2026ರ ಫೈನಲ್ ಕ್ರಿಕೆಟ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ ನಡುವೆ ನಡೆಯಿತು. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡ, ಡೆಲ್ಲಿ ನೀಡಿದ್ದ 204 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ ಬೆಂಗಳೂರು ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ : ಬೆಂಗಳೂರು ತಂಡ ಚಾಂಪಿಯನ್



































