ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧಾರ್ಮಿಕ ನಂಬಿಕೆ ಮೇಲೆ ಸಾಮಾಜಿಕ ಬದಲಾವಣೆ ಮಾಡಿದೆ ಎಂದು ಪತ್ರಕರ್ತ ಖ್ಯಾತ ವಾಗ್ಮಿ ಶ್ರೀಕಾಂತ್ ಶೆಟ್ಟಿ ಅಭಿಪ್ರಾಯ ಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವ್ರದ್ದಿ ಯೋಜನೆ ಸುಳ್ಯ ತಾಲೂಕು ಸಂಪಾಜೆ ವಲಯ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಸಂಪಾಜೆ ವಲಯ ಮತ್ತು ಊರವರ ಸಹಕಾರದೊಂದಿಗೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ಫೆ.7ರಂದು ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಗ್ರಾಮೀಣಾಭಿವೃದ್ಧಿ ಯೋಜನೆ ಧಾರ್ಮಿಕ ನಂಬಿಕೆಯ ಅಡಿಪಾಯದಲ್ಲಿ ಸಾಮಾಜಿಕ ಬದಲಾವಣೆ ಮಾಡಲು ಹೊರಟ ಕಾರಣ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬಡವರು ಸಮಾಜದಲ್ಲಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿದ್ದಾರೆ.ಧರ್ಮವನ್ನು ದಿಕ್ಕಾರಿಸಿ ನಂಬಿಕೆಯನ್ನು ಅಲ್ಲಗಳೆದು ಸಾಮಾಜಿಕ ಬದಲಾವಣೆ ಅಸಾಧ್ಯ ಎಂದು ಅವರು ಹೇಳಿದರು.
ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷೆ ಮಾಲತಿ ಬೋಜಪ್ಪ ಅಧ್ಯಕ್ಷತೆ ವಹಿಸಿದ್ದರು.
ದೇವಳದ ವ್ಯವಸ್ಥಾಪನಾ ಸಮಿತಿ ಕೇಶವ ಯು.ಕೆ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ,ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಜನಜಾಗೃತಿ ತಾಲೂಕು ಸಮಿತಿ ಅಧ್ಯಕ್ಷ ಲೋಕನಾಥ ಅಮೆಚೂರು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ತಾಲೂಕು ಭಜನಾ ಪರಿಷತ್ ಸಮಿತಿ ಅಧ್ಯಕ್ಷ ಸೋಮಶೇಖರ ಪೈಕ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,ತೊಡಿಕಾನ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷೆ ಭಾರತಿ ಪುರುಶೋತ್ತಮ, ಸಂಪಾಜೆ ವಲಯ ಒಕ್ಕೂಟದ ಅಧ್ಯಕ್ಷ ಹೂವಯ್ಯ ಗೌಡ,ತೊಡಿಕಾನ ಒಕ್ಕೂಟದ ಅಧ್ಯಕ್ಷ ಜನಾರ್ದನ ಬಾಳೆಕಜೆ ವೇದಿಯಲ್ಲಿ ಉಪಸ್ಥಿತರಿದ್ದರು.ಯೋಜನಾಧಿಕಾರಿ ಮಾದವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು,ಕ್ರೀಡಾ ಸಾಧಕರನ್ನು,ನಾಟಿ ವೈದ್ಯರನ್ನು, ಸೈನಿಕರನ್ನು ಒಕ್ಕೂಟದ ಮಾಜಿ ಅಧ್ಯಕ್ಷರನ್ನು,ಮಾಜಿ ಸೇವಾ ಪ್ರತಿನಿಧಿಗಳನ್ನು,ನವಜೀವನ ಸಮಿತಿ ಸದಸ್ಯರನ್ನು ಗೌರವಿಸಲಾಯಿತು. ಉದಯಭಾಸ್ಕರ್ ಮತ್ತು ಅಶೋಕ ಪೀಚೆ ಕಾರ್ಯಕ್ರಮ ನಿರೂಪಿಸಿದರು.ಸುಮಾರು 1200ಕ್ಕೂ ಅಧಿಕ ಮಂದಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧಾರ್ಮಿಕ ನಂಬಿಕೆಯ ಮೇಲೆ ಸಾಮಾಜಿಕ ಬದಲಾವಣೆ ಮಾಡಿದೆ : ಖ್ಯಾತ ವಾಗ್ಮಿ ಶ್ರೀಕಾಂತ್ ಶೆಟ್ಟಿ ಅಭಿಮತ

















