ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಾರಂಭವಾಗಿ 28 ವರ್ಷ ಆಗಿರುವ ಹಿನ್ನಲೆಯಲ್ಲಿ ಫೆ. 9 ರಂದು ಸೊಸೈಟಿ ಸಭಾಂಗಣದಲ್ಲಿ ಸ್ಥಾಪನಾ ದಿನಾಚರಣೆಯ ಸಮಾರಂಭ ನಡೆಯಿತು.
ಸೊಸೈಟಿ ಅಧ್ಯಕ್ಷ ಕೆ.ಸಿ.ಸದಾನಂದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ರೈಸ್ತ ಅಲ್ಪಸಂಖ್ಯಾತರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಿಲಿಯಂ ಲಸ್ರಾದೋ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವೆಂಕಟ್ರಮಣ ಸೊಸೈಟಿಯ ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್, ಮಾಜಿ ಅಧ್ಯಕ್ಷರುಗಳಾದ ಜಾಕೆ ಸದಾನಂದ, ಚಂದ್ರಾ ಕೋಲ್ಟಾರ್, ಕೆ.ಸಿ.ನಾರಾಯಣ ಗೌಡ, ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್ ಮಾತನಾಡಿದರು.
ವೆಂಕಟರಮಣ ಸೊಸೈಟಿಯ ಮಾಜಿ ನಿರ್ದೇಶಕರಿಗೆ, ಹಾಲಿ ನಿರ್ದೇಶಕರಿಗೆ, ಪ್ರಸಕ್ತ ಅಧ್ಯಕ್ಷ, ಉಪಾಧ್ಯಕ್ಷರಿಗೆ, ಆರಂಭದಿಂದ ಕಾರ್ಯನಿರ್ವಹಿಸಿದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಶಾಖಾ ವ್ಯವಸ್ಥಾಪಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೃಷ್ಣಪ್ರಸಾದ್ ಪ್ರಾರ್ಥಿಸಿದರು.ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ ಸ್ವಾಗತಿಸಿ, ನಿರ್ದೇಶಕ ಪಿ.ಎಸ್.ಗಂಗಾಧರ್ ವಂದಿಸಿದರು. ಸಿ.ಒ ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ : ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

















