ಸಂಪಾಜೆ : ಫೆ.11ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಫೆ. 11ರಂದು ನಡೆಯಲಿದೆ ಎಂದು ಮಾಜಿ ಗ್ರಾ. ಪಂ. ಅಧ್ಯಕ್ಷ ಹಾಲಿ ಸದಸ್ಯ ಜಿ. ಕೆ.ಹಮೀದ್ ತಿಳಿಸಿದ್ದಾರೆ.
ಬಳಿಕ ಸಭಾ ಕಾರ್ಯಕ್ರಮ ಸಜ್ಜನ ಸಮುದಾಯಭವನದಲ್ಲಿ ನಡೆಯಲಿದೆ. ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಬ್ಬಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂ‌ರ್, ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ಅಧ್ಯಕ್ಷ ಹರೀಶ್ ಕುಮಾ‌ರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹೀದ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕ. ರಾ ಬೀಜ ಮತ್ತು ಸಾವಯವ ಪ್ರಮಾನನ ಸಂಸ್ಥೆ ಬೆಂಗಳೂರು ಇದರ ಅಧ್ಯಕ್ಷೆ ಲಾವಣ್ಯ ಬಲ್ಲಾಲ್ ಜೈನ್, ಶಾಸಕಿ ಕು. ಭಾಗೀರಥಿ ಮುರುಳ್ಯ, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ ಸೋಜಾ, ಹಾಗೂ ಮಂಜುನಾಥ ಭಂಡಾರಿ, ಪ್ರತಾಪ್ ಸಿಂಹ ನಾಯಕ್ ಮತ್ತಿತರರ ಗಣ್ಯರು ಭಾಗವಹಿಸಿ‌ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
7 ಕೋಟಿಗೂ ಮಿಕ್ಕಿ ಅನುದಾನದ ಉದ್ಘಾಟನೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಗ್ರಾ. ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ.ಹನೀಫ್, ಸದಸ್ಯರಾದ ಸುಂದರಿ ಮುಂಡಡ್ಕ, ವಿಮಲ ಪ್ರಸಾದ್‌ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top