ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ಭಾರತದಾದ್ಯಂತ ಫೆ.12ರಂದು ಮುಷ್ಕರಕ್ಕೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ ಈ ಬಂದ್ ನಡೆಯುತ್ತಿದೆ. ಹೊಸ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಪ್ರತಿಭಟನಾ ಒಕ್ಕೂಟಗಳು ಹೇಳಿದೆ. ಪ್ರಮುಖ ಬ್ಯಾಂಕಿಂಗ್ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿದ್ದು, ಸಾರ್ವಜನಿಕ ವಲಯದ ಬ್ಯಾಂಕ್ ಸೇವೆಗಳ ಮೇಲೆ ಬಂದ್ ಪರಿಣಾಮ ಬೀರುವ ಸಾಧ್ಯತೆಯಿದೆ.
ಕಾರ್ಮಿಕ ಸಂಹಿತೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದ ಖಂಡಿಸಿ ಕಾರ್ಮಿಕ, ರೈತ ಸಂಘಟನೆಗಳಿಂದ ನಾಳೆ ಭಾರತ್ ಬಂದ್‌ಗೆ ಕರೆ



































