ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಪತ್ರಕರ್ತಕರಿಗೆ ಪಿಂಚನಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ದಮಠದ ಸ್ವಾಮೀಜಿಗಳಾದ ರಾಜೇಶನಾಥಜೀಯವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಪ್ರತಿಜ್ಞಾವಿಧಿ ಬೋಧಿಸಿ ಪದಗ್ರಹಣ ನೆರವೇರಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಶುಭಹಾರೈಸಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಡಂಗಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಖಜಾಂಚಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿದರು. ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ದಯಾನಂದ ಕೊರತ್ತೋಡಿ ವಂದಿಸಿದರು.ಸುದ್ದಿ ಚಾನೆಲ್ ನಿರೂಪಕಿ ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿದರು.



































