ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ.
ರಾಧಾಕೃಷ್ಣ ಬೊಳ್ಳೂರು ಅವರು ಸುಳ್ಯ ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿ, ಕೆಡಿಪಿ ಮಾಜಿ ಸದಸ್ಯರಾಗಿ, ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 4 ಬಾರಿ ಆಧ್ಯಕ್ಷರಾಗಿ, ಎಪಿಎಂಸಿ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸಹಕಾರಿ ಸಂಘದ ನಿರ್ದೇಶಕರಾಗಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ

















