ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಫೆ. 15ರಂದು ಪೂರ್ವ ಸಂಪ್ರದಾಯದಂತೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ
ಮಹಾಶಿವರಾತ್ರಿ ಉತ್ಸವ ನಡೆಯಲಿದೆ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫೆ. 16 ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು.
ಫೆ. 15ರಂದು ಸಂಜೆ ಸೀಮೆಯ ಭಜನಾ ತಂಡಗಳಿಂದ ಭಜನೆ ಹಾಗೂ ಕುಣಿತ ಭಜನೆ, ರಾಶಿಪೂಜೆ (10 ರುದ್ರಾಭಿಷೇಕ) ರಂಗಪೂಜೆ, ಉತ್ಸವ ಬಲಿ ಹೊರಡುವುದು ಹಾಗೂ ಫೆ. 16 ರಂದು ಗಣಪತಿ ಹೋಮ, ದರ್ಶನಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು ಮತ್ತು ಎರಡೂ ದಿನವೂ ತುಲಾಭಾರ ಸೇವೆ ನಡೆಯುಲಿದೆ.
ನಾಳೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಆಚರಣೆ

















