ಸುಳ್ಯ: ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅರೋಗ್ಯ ವೃದ್ಧಿಗೆ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ.

ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರೂ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಶ್ರೀ. ಮಂಜುನಾಥ ಭಂಡಾರಿ ಅವರು ಶೀಘ್ರವೇ ಸಂಪೂರ್ಣ ಚೇತರಿಸಿಕೊಂಡು, ಹಿಂದಿನಂತೆ ಪಕ್ಷ ಸಂಘಟನೆ, ರಾಜಕೀಯ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಲಿ ಎಂದು ಶ್ರೀ ಚೆನ್ನಕೇಶವ ದೇವರಲ್ಲಿ ಪ್ರಾರ್ಥಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜೊತೆಗೆ ಅವರಿಗೆ ದೃಢ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಪ್ಪಾಡಿ, ದ.ಕ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯರಾದ ಗೋಕುಲ್ ದಾಸ್ ಸುಳ್ಯ, ಸುಳ್ಯದ ಉದ್ಯಮಿ ವಿಖ್ಯಾತ್ ರೈ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಗೂನಡ್ಕ ಹಾಗೂ ಪ್ರಮುಖರಾದ ಮಧುಸೂದನ್ ಬೂಡು, ಮಂಜುನಾಥ ಮಡ್ತಿಲ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top