ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿ 17 ವರ್ಷದ ಭೂಮಿಕಾ ಮಾಳಂಗಿಯಾಗಿದ್ದಾರೆ.
ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು.
ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.
ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನವೇ ಹೃದಯಾಘಾತಕ್ಕೆ ಬಲಿ

















